ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

Date:

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90) ಅವರು ಇಂದು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಇಂದು ಅವರ ಮನೆಗೆ ಕರೆದೊಯ್ದ ಬಳಿಕ ಕೆಲಹೊತ್ತಿನಲ್ಲಿ ವಿಧಿವಶರಾದರು.

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಅನಾದಿಕಾಲದಿಂದಲೂ ದಾಸೋಹ ಪರಂಪರೆಯನ್ನು ಮುಂದುವರೆಸಿಕೊಂಡು ಬರುತ್ತಿದೆ. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಅದನ್ನು ದಾಸೋಹ ಜೊತೆಗೆ ಕಲಬುರಗಿಯಲ್ಲಿ ಶರಣಬಸವೇಶ್ವರ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಶಾಲಾ-ಕಾಲೇಜುಗಳ ಸ್ಥಾಪಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರುವಾಸಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರಿಗೆ ಪತ್ನಿ ದಾಕ್ಷಾಯಣಿ ಅಪ್ಪ, ಮೂವರು ಪುತ್ರಿಯರು, ಪುತ್ರ ಸಂಸ್ಥಾನದ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಇದ್ದಾರೆ.

ಶರಣಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿಯೇ ಶರಣಬಸಪ್ಪ ಅಪ್ಪಾ ಅವರ ಅಂತ್ಯಸಂಸ್ಕಾರವನ್ನು ಶುಕ್ರವಾರ ಸಂಜೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ.  ಸಾವಿರಾರು ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನೆಲೆಯಲ್ಲಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲು ಕುಟುಂಬಸ್ಥರ ಜೊತೆ ಸಮಾಲೋಚನೆ‌ ನಡೆಸಿ ತಿಳಿಸಲಾಗುವುದು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಹೇಳಿದರು.

ಇದನ್ನೂ ಓದಿ : ಬೀದರ್ | ಒಪ್ಪೊದಿಲ್ಲ, ಒಪ್ಪೊದಿಲ್ಲ ನಾಗಮೋಹನದಾಸ್ ವರದಿ ಒಪ್ಪೊದಿಲ್ಲ : ಬೃಹತ್‌ ಪ್ರತಿಭಟನಾ ರ್‍ಯಾಲಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...