ಬೀದರ್‌ | ಶಶಿಕಾಂತ್‌ ಶೆಂಬೆಳ್ಳಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

Date:

ಕರ್ನಾಟಕ ಮಾಧ್ಯಮ ಅಕಾಡೆಮಿಯ 2023-24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಬೀದರ್‌ ಜಿಲ್ಲಾ ಪ್ರಜಾವಾಣಿ ಹಿರಿಯ ವರದಿಗಾರ ಶಶಿಕಾಂತ್‌ ಎಸ್.ಶೆಂಬೆಳ್ಳಿ ಅವರಿಗೆ ಪ್ರದಾನ ಮಾಡಲಾಯಿತು.

ಸೋಮವಾರ ಬೆಂಗಳೂರಿನ ಐಐಎಸಿಯಲ್ಲಿರುವ ಜೆಎನ್ ಟಾಟಾ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿಯು ₹50 ಸಾವಿರ‌ ನಗದು, ಪ್ರಮಾಣ ಪತ್ರ ಹೊಂದಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನುಂ, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ಅಕಾಡೆಮಿ ಕಾರ್ಯದರ್ಶಿ ಸಹನಾ ಹಾಜರಿದ್ದರು. ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೈರುಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...