ಶಿಡ್ಲಘಟ್ಟ | ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಂದಕೃಷ್ಣ ಮಾದಿಗರ ಹುಟ್ಟುಹಬ್ಬ ಆಚರಣೆ

Date:

ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ, ಪದ್ಮಶ್ರೀ ಪುರಸ್ಕೃತ ಮಂದಕೃಷ್ಣ ಮಾದಿಗ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.

“ಅವರ ನಾಯಕತ್ವ ನಮ್ಮೆಲ್ಲರಿಗೂ ದಿಕ್ಕು ತೋರಿಸುತ್ತಿದೆ. ಅವರ ಹುಟ್ಟು ಹಬ್ಬದ ಅಂಗವಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿರುವುದು ನಮಗೆ ತೃಪ್ತಿ ತಂದಿದೆ” ಎಂದು ಎಂಆರ್‌ಪಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ ಎಂ ದೇವರಾಜ್ ಹೇಳಿದರು.

ತಾಲೂಕಿನ ಮಾದಿಗ ದಂಡೋರ ಸಂಘಟನೆಯ ಪದಾಧಿಕಾರಿಗಳು, ವಿವಿಧ ದಲಿತ ಸಂಘಟನೆಗಳ ಸದಸ್ಯರು ಸೇರಿ, ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೇಕ್ ಕತ್ತರಿಸಿ, ಕೂಲಿಕಾರ್ಮಿಕರಿಗೆ ಅನ್ನದಾನ ಮಾಡುವ ಮೂಲಕ ಮೌಲ್ಯಾಧಾರಿತ ಸೇವೆಯ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

80ರ ದಶಕದಲ್ಲಿ ಮಾದಿಗ ಜನಾಂಗ ತಮ್ಮ ಜಾತಿ ಎಂದು ಹೇಳಿಕೊಳ್ಳಲು ಮುಜುಗರ ಪಡುತ್ತಿದ್ದವರು ಇಂದು ಧೈರ್ಯದಿಂದ ತಮ್ಮ ಜಾತಿಯನ್ನು ಮಾದಿಗ ಎಂದು ಎದೆ ತಟ್ಟಿಕೊಂಡು ಹೇಳುವಂತೆ ಮಾಡಿದ್ದು ಮಂದ ಕೃಷ್ಣ ಮಾದಿಗ.

ಇದನ್ನೂ ಓದಿ: ಶಿಡ್ಲಘಟ್ಟ | ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ; 2 ಕೆಜಿ ಗಾಂಜಾ ವಶಕ್ಕೆ

ಸಂಘಟಕರಾದ ನಾಗನರಸಿಂಹ, “ಮಾದಿಗ ಸಮುದಾಯದ ಒಳಗಿನ ಎಬಿಸಿಡಿ ವರ್ಗೀಕರಣವನ್ನು ರಾಷ್ಟ್ರ ಮಟ್ಟದಲ್ಲಿ ಪ್ರಸ್ತಾಪಿಸಿ ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕೆಂಬ ಆಲೋಚನೆಯಿಂದ ಒಳಮಿಸಿಲಾತಿಯ ಹೋರಾಟಕ್ಕಾಗಿ ಇಡೀ ಜೀವನವನ್ನೇ ತ್ಯಾಗ ಮಾಡಿದಂತವರು, ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮೆಲ್ಲರಿಗೂ ಸಂತೋಷ ತಂದಿದೆ” ಎಂದರು.

ಈ ಸಂದರ್ಭದಲ್ಲಿ ಕೆ.ನರಸಿಂಹಮೂರ್ತಿ, ಡಿ ಕೃಷ್ಣಪ್ಪ, ತಾತಳ್ಳಿ ಚಲಪತಿ, ಕೆ ನಾರಾಯಣಸ್ವಾಮಿ, ಮಂಜುನಾಥ್ ಅಲಸೂರು, ಭಕ್ತರಹಳ್ಳಿ ಡಾ. ವಿಶ್ವನಾಥ್, ಚನ್ನಹಳ್ಳಿ ದೇವರಾಜ್, ಲೋಕೇಶ್, ವೇಣುಗೋಪಾಲ್, ಗೋಕುಲ್, ನರಸಿಂಹಪ್ಪ, ನಾರಾಯಣಸ್ವಾಮಿ, ಪ್ರಕಾಶ್, ಅಶೋಕ್, ಡಾ.ಶಾಮ್ ರಾಜ್, ಗುರುಮೂರ್ತಿ, ರವಿಶಂಕರ್, ಚನ್ನಕೇಶವ, ವಸಂತ್, ಸುಲದೇನಹಳ್ಳಿ ವೆಂಕಟರಾಯಪ್ಪ ಹಾಗೂ ದಲಿತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...