ಶಿಡ್ಲಘಟ್ಟ | ಪ್ರೀತಿ ನಿರಾಕರಣೆ: ಜೋಡಿ ಆತ್ಮಹತ್ಯೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದವರಾದ ನವೀನ್(22) ಮತ್ತು 15 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು.

ಮೃತ ನವೀನ್ ಚಾಲಕ ವೃತ್ತಿ ಮಾಡುತ್ತಿದ್ದು, ಬಾಲಕಿ ಸರಕಾರಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಒಂದೇ ಗ್ರಾಮ, ಒಂದೇ ಸಮುದಾಯದವರಾದ ಇಬ್ಬರು ಪರಸ್ಪರ ಪ್ರೀತಿಯಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದ ಬಾಲಕಿಯ ಪೋಷಕರು ಪ್ರೀತಿಯನ್ನು ನಿರಾಕರಿಸಿದ್ದರು. ಯುವಕನ ವಿರುದ್ಧ ಇದೇ ಮಾರ್ಚ್ 30ರಂದು ಶಿಡ್ಲಘಟ್ಟ ತಾಲೂಕಿನ ಬಟ್ಲಹಳ್ಳಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದ ಕೂಡಲೇ ಆರೋಪಿ ನವೀನ್ ಪೊಲೀಸರ ಕೈಗೆ ಸಿಗದೆ ಕೆಲ ತಿಂಗಳುಗಳ ಕಾಲ ತಲೆಮರೆಸಿಕೊಂಡಿದ್ದ. ನಂತರ ಭಟ್ಲಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಗೌನಿಪಲ್ಲಿ ಗ್ರಾಮದಲ್ಲಿದ್ದ ನವೀನ್‌ನನ್ನು ಹಿಡಿದು ಜೈಲಿಗೆ ಕಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸರಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಗೆ ಮಧ್ಯಾಹ್ನದ ಬಿಸಿಯೂಟ; ಸಂದೀಪ್‌ ರೆಡ್ಡಿ

ಇದೆಲ್ಲ ಬೆಳವಣಿಗೆಗಳ ಬಳಿಕ ಮತ್ತೆ ಭೇಟಿಯಾಗಿದ್ದ ಪ್ರೇಮಿಗಳು, ಸೆ.13ರ ಸಂಜೆ ಭೀರಪ್ಪನಹಳ್ಳಿ ಅರಣ್ಯ ಪ್ರದೇಶಕ್ಕೆ ತೆರಳಿ ಒಂದೇ ಕುಣಿಕೆಗೆ ಇಬ್ಬರೂ ಕೊರಳೊಡ್ಡಿದ್ದಾರೆ. ಭಟ್ಲಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...