ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ವಿಚಾರ: ಸಚಿವ ಝಮೀರ್ ಅಹ್ಮದ್ ಕಾರಿಗೆ ಕಲ್ಲೆಸೆದ ಅಜ್ಜಂ ಪೀರ್ ಖಾದ್ರಿ ಬೆಂಬಲಿಗರು

Date:

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ನಿನ್ನೆ ಘೋಷಿಸಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸೀರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿತ್ತು.

ಅಜ್ಜಂ ಪೀರ್ ಖಾದ್ರಿಯವರಿಗೆ ಟಿಕೆಟ್ ನೀಡಬೇಕೆಂಬ ಪ್ರಬಲ ಒತ್ತಡವಿತ್ತಾದರೂ, ಕೊನೆಯ ಕ್ಷಣದಲ್ಲಿ ಯಾಸೀರ್​ ಅಹ್ಮದ್ ಖಾನ್ ಅವರಿಗೆ ನೀಡಿರುವುದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಗ್ಗಾಂವಿ ಟಿಕೆಟ್ ವಂಚಿತ ಅಜ್ಜಂ ಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮುಂದಾದ ಕಾರಣ ಸಚಿವ ಜಮೀರ್ ಅಹಮದ್ ಖಾನ್ ಅವರು ಸಚಿವ ರಹೀಂ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ ಅವರೊಂದಿಗೆ ಖಾದ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಮನವೊಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸಮಾಧಾನಗೊಂಡಿದ್ದ ಬೆಂಬಲಿಗರನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಆದರೆ, ಇದಕ್ಕೆ ಬಗ್ಗದ ಅಜ್ಜಂ ಪೀರ್ ಖಾದ್ರಿ ಬೆಂಬಲಿಗರು, ಸಚಿವ ಝಮೀರ್ ಅಹ್ಮದ್ ಖಾನ್‌ ಅವರ ಕಾರಿಗೆ ಹುಲಗೂರು ಗ್ರಾಮದಲ್ಲಿ ಕಲ್ಲೆಸೆದಿದ್ದಾರೆ.

WhatsApp Image 2024 10 25 at 3.07.44 PM 1

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಯ ಟಿಕೆಟ್‌ಗಾಗಿ ಅಲ್ಪಸಂಖ್ಯಾತ ಸಮುದಾಯದಿಂದ ಅಜ್ಜಂ ಪೀರ್ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಪೈಪೋಟಿ ಇತ್ತು. ಮತ್ತೊಂದೆಡೆ ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ, ಸೋಮಣ್ಣ ಬೇವಿನಮರ, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಅವರು ಟಿಕೆಟ್​ಗಾಗಿ ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಹೈಕಮಾಂಡ್​ ಮತ್ತೆ ಯಾಸೀರ್ ಖಾನ್ ಪಠಾಣ್ ಅವರಿಗೆ ಮಣೆ ಹಾಕಿತ್ತು. ಇದರಿಂದಾಗಿ ಅಜ್ಜಂ ಪೀರ್ ಖಾದ್ರಿಯವರ ಬೆಂಬಲಿಗರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್, 2023ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ, ಸೋತಿದ್ದರು.

ಅಜ್ಜಂಪೀರ್
ಅಜ್ಜಂ ಪೀರ್ ಖಾದ್ರಿ ಮನೆಯಲ್ಲಿ ಸಚಿವ ಝಮೀರ್ ಹಾಗೂ ಮತ್ತಿತತರು

ಬೈಕಿನಲ್ಲಿ ಬಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅಜ್ಜಂ ಪೀರ್ ಖಾದ್ರಿ

ಈ ನಡುವೆ ಕಾಂಗ್ರೆಸ್ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಸೈಯ್ಯದ್ ಅಜ್ಜಂ ಪೀರ್ ಖಾದ್ರಿ, ಸಚಿವರ ಮನವೊಲಿಕೆಗೆ ಬಗ್ಗಿಲ್ಲ. ಕೊನೆಯ ಕ್ಷಣದಲ್ಲಿ ಚುನಾವಣಾಧಿಕಾರಿಯ ಕಚೇರಿಗೆ ಬೈಕಿನಲ್ಲಿ ದೌಡಾಯಿಸಿದ್ದು, ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಮಾಡಿದ ಯಾಸೀರ್ ಖಾನ್ ಪಠಾಣ್

ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಯಾಸಿರ್

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ” ಎಂದಿದ್ದಾರೆ.

ಟಿಕೆಟ್ ಕೈ ತಪ್ಪಿರುವ ಹಿಂದೆ ಕಾಣದ ಕೈಗಳ ಪಿತೂರಿ: ಅಜ್ಜಂ ಪೀರ್ ಖಾದ್ರಿ

“ನಾನು ಒಬ್ಬ ಅಲ್ಪಸಂಖ್ಯಾತ ಅನ್ನುವ ಕಾರಣಕ್ಕೆ ಬೇರೆ ಸಮುದಾಯದ ಯಾರೂ ಬಂದು ಪ್ರಚಾರ ಮಾಡಲಿಲ್ಲ. ಹೊಂದಾಣಿಕೆಯ ರಾಜಕಾರಣ ಮಾಡಿ ಬೊಮ್ಮಾಯಿಯನ್ನು ಗೆಲ್ಲಿಸಿದ್ದಾರೆ. ಈಗ ಹಾನಗಲ್ಲಿನ ಪಠಾಣ್‌ಗೆ ಟಿಕೆಟ್ ಕೊಟ್ಟಿದ್ದಾರೆ. ಅವನೊಬ್ಬ ರೌಡಿಶೀಟರ್, ಅವನ ಮೇಲೆ 17 ಕೇಸ್ ಇದೆ. ಕ್ಷೇತ್ರದ ಜನರು ಸ್ಥಳೀಯ ಅಭ್ಯರ್ಥಿಯನ್ನು ಬಯಸುತ್ತಾರೆ. ನಾನು ಸ್ಥಳೀಯನಾಗಿದ್ದೇನೆ, ಮುಂದಿನ ದಿನದಲ್ಲಿ ಪಿತೂರಿಯ ಎಲ್ಲಾ ವಿಚಾರ ಬಹಿರಂಗವಾಗಲಿದೆ” ಎಂದು ಅಜ್ಜಂ ಪೀರ್ ಖಾದ್ರಿ ಹರಿಹಾಯ್ದಿದ್ದಾರೆ.

“ನಾನು ಸಿದ್ದರಾಮಯ್ಯರ ಅಭಿಮಾನಿ. ಅವರ ವಿರುದ್ಧ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಟಿಕೆಟ್ ಕೈ ತಪ್ಪಿರುವ ಹಿಂದೆ ಕಾಣದ ಕೈಗಳ ಪಿತೂರಿ ನಡೆದಿದೆ. ಒಳ ಒಪ್ಪಂದ ಆಗಿದೆ ಎಂದು ಜನ ಮಾತಾಡಿಕೊಳ್ಳುತ್ತಾರೆ. ಗೂಂಡಾಗಿರಿ ಮಾಡಿದವನಿಗೆ ಟಿಕೆಟ್ ಕೊಟ್ಟಿದ್ದಾರೆ. ಸೋಲುವವರಿಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಪಕ್ಷೇತರವಾಗಿ ನಿಲ್ಲಲು ಕಾರ್ಯಕರ್ತರ ಒತ್ತಡ ಹೆಚ್ಚಾಗಿದೆ. ನನ್ನ ಕಾರ್ಯಕರ್ತರು ವಿಷ ಕುಡಿಯಲು ಹೋಗಿದ್ದಾರೆ. ಹಾಗಾಗಿ, ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ” ಎಂದು ಖಾದ್ರಿ ತಿಳಿಸಿದ್ದಾರೆ.

jameer
ಹಜರತ್ ಪೀರ್ ಶಾ ಖಾದ್ರಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹಮದ್ ಖಾನ್. ಈ ವೇಳೆ ಜೊತೆಗಿದ್ದ ಬಂಡಾಯ ಅಭ್ಯರ್ಥಿ ಅಜ್ಜಂ ಪೀರ್ ಖಾದ್ರಿ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...