ಶಿಕಾರಿಪುರ | ನಕಲಿ ಚಿನ್ನದ ನಾಣ್ಯ ನೀಡಿ ಲಕ್ಷಾಂತರ ರೂ ಹಣ ಪೀಕಿದ್ದ ಆರೋಪಿ ಬಂಧನ

Date:

ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ಲಕ್ಷಾಂತರ ರೂ ಹಣ ದೋಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದಿದೆ. ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿರಾಳಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.

ನಕಲಿ ಚಿನ್ನದ ನಾಣ್ಯ ಮಾರಾಟ ಪ್ರಕರಣಗಳಲ್ಲಿ ಕಳ್ಳರು ಪತ್ತೆಯಾಗೋದೇ ಅಪರೂಪ. ಅಂಥದ್ದರಲ್ಲಿ ಶಿರಾಳಕೊಪ್ಪ ಪಿಎಸ್ಐ ಪ್ರಶಾಂತ್ ನಡೆಡಸಿದ ಕಾರ್ಯಾಚರಣೆಯಲ್ಲಿ ಈ ಅಪರೂಪದ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ಡಿಸೆಂಬರ್‌ 29ರಂದು ಹಾಸನ ಮೂಲದ ಕಲ್ಲೇಶ್‌ ಎಂಬುವವರಿಗೆ ಧರ್ಮಸ್ಥಳದಲ್ಲಿ ಚಂದ್ರು ಎಂಬ ವ್ಯಕ್ತಿಯ ಪರಿಚಯವಾಗಿದೆ. ಶಆತ ಜನವರಿ 06 ರಂದು ಕಲ್ಲೇಶ್‌ಗೆ ಕರೆ ಮಾಡಿ, ಮನೆ ಪಕ್ಕದ ಜಾಗದಲ್ಲಿ 3 ಕೆಜಿ ಬಂಗಾರದ ನಾಣ್ಯಗಳು ಸಿಕ್ಕಿರುತ್ತವೆ. ಅವುಗಳನ್ನು ಮಾರಾಟ ಮಾಡಬೇಕಿದೆ ಎಂದು ಹೇಳಿದ್ದಾನೆ. ಆತನ ಮಾತು ನಂಬಿ ಕಲ್ಲೇಶ್‌, ಶಿರಾಳಕೊಪ್ಪಕ್ಕೆ ಬಂದು, ಚಂದ್ರು ಮತ್ತು ನವೀನ್ ಇಬ್ಬರು ಸೇರಿ ನೀಡಿದ ಒಂದು ಬಂಗಾರದ ನಾಣ್ಯ ಪಡೆದಿದ್ದಾನೆ. ಊರಿಗೆ ಹಿಂತಿರುಗಿ ಪರಿಶೀಲಿಸಿದಾಗ ಅದು ಅಸಲಿ ಚಿನ್ನದ ನಾಣ್ಯವಾಗಿತ್ತು. ಬಳಿಕ ಜನವರಿ 08 ರಂದು ಶಿರಾಳಕೊಪ್ಪಕ್ಕೆ ಬಂದು ಚಂದ್ರು ಮತ್ತು ನವೀನ್ ಇಬ್ಬರಿಗೆ ಐದು ಲಕ್ಷ ಹಣ ನೀಡಿ ಅವರಿಂದ 800 ಗ್ರಾಂ ತೂಕದ ನಾಣ್ಯಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷಿಸಲಾಗಿ ಅವು ನಕಲಿ ಎಂದು ತಿಳಿದು ಬಂದಿದ್ದು, ತಾನು ಮೋಸ ಹೋಗಿರುವುದಾಗಿ ಕಲ್ಲೇಶ್‌ಗೆ ಅರಿವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಸಿಎಂ ಸಿದ್ಧರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆಯಿಂದ ಇಂದು ‘ಶಿಕಾರಿಪುರ’ ಬಂದ್‌ಗೆ ಕರೆ

1001187051

ಕುಪಿತಗೊಂಡ ಕಲ್ಲೇಶ್‌, ತನಗೆ ಬಂಗಾರದ ನಾಣ್ಯಗಳೆಂದು ಸುಳ್ಳು ಹೇಳಿ ನಕಲಿ ನಾಣ್ಯ ನೀಡಿ ಹಣವನ್ನು ಪಡೆದು ಮೋಸ ಮಾಡಿದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತಾರೆ. ಕೇಸ್‌ ಕೈಗಿತ್ತಿಕೊಂಡ ಪೊಲೀಸರ ತಂಡ ಜನವರಿ 29 ರಂದು ಸೊರಬ ತಾಲೂಕು ತತ್ತೂರು ಗ್ರಾಮದ ಆರೋಪಿ ಚಂದ್ರಪ್ಪ (48)ನನ್ನು ಬಂಧಿಸಿದೆ. ಆರೋಪಿಯಿಂದ ಪ್ರಕರಣ ಸಂಬಂಧ ರೂ 5,00,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...