ಶಿಕಾರಿಪುರ | ಸರ್ಕಾರಿ ಆಸ್ಪತ್ರೆಗೆ ಕೀಲು ಮೂಳೆ ತಜ್ಞ ವೈದ್ಯರ ನೇಮಕ : ಜಯ ಕರ್ನಾಟಕ ಜನಪರ ವೇದಿಕೆಯಿಂದ ಅಭಿನಂದನೆ

Date:

ಶಿಕಾರಿಪುರ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆ ತಜ್ಞ ವೈದ್ಯರ ಕೊರತೆಯಿಂದಾಗಿ ಸಾರ್ವಜನಿಕರು ರೋಗಿಗಳು ಸುಮಾರು ಎರಡು ವರ್ಷಗಳಿಂದ ಹೊರ ಜಿಲ್ಲೆಗಳಿಗೆ ಮತ್ತು ಶಿವಮೊಗ್ಗಕ್ಕೆ ತೆರಳಬೇಕಾದ ಪರಿಸ್ಥಿತಿ ಒದಗಿ ಬಂದಿತ್ತು.

ಈ ವಿಚಾರವಾಗಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಕೀಲು ಮೂಳೆ ತಜ್ಞ ವೈದ್ಯರ ನೇಮಕವಾಗುವಂತೆ ಒತ್ತಾಯಿಸಿ ಅನೇಕ ಬಾರಿ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯ ಸಚಿವರು ಸೇರಿದಂತೆ ತಾಲೂಕಿನ ಜನ ಪ್ರತಿನಿಧಿಗಳ ಗಮನ ಕೂಡ ಸೆಳೆಯಲಾಗಿತ್ತು.

ಕೊನೆಗೆ ಸಂಘಟನೆ ಪತ್ರಿಕಾಗೋಷ್ಠಿ ನಡೆಸಿ ಉಪಾಸ ಸತ್ಯಾಗ್ರಹ ನಡೆಸುವ ಸಿದ್ಧತೆ ಕೈಗೊಂಡ ಬೆನ್ನಲ್ಲೇ ಶಿವಮೊಗ್ಗ ಜಿಲ್ಲಾ ಆಡಳಿತದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸರ್ಕಾರ ನೂತನವಾಗಿ ಕೀಲು ಮೂಳೆ ರೋಗ ತಜ್ಞ ವೈದ್ಯರನ್ನು ನೇಮಕ ಮಾಡಿದ್ದು ಸಾರ್ವಜನಿಕರಿಗೆ ಸಂತಸವಾಗಿದೆ ಎಂದು ಜಯಕರ್ನಾಟಕ ಜನಪರ ವೇದಿಕೆಯ ವತಿಯಿಂದ ನೂತನ ವೈದ್ಯ ರಾಕೇಶ್ ರವರಿಗೆ ಸ್ವಾಗತ ಕೋರಿ ಸನ್ಮಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಪ್ರಧಾನ ಕಾರ್ಯದರ್ಶಿ ಹುಲಿಗಿ ಕೃಷ್ಣ ಮಾತನಾಡಿ ಸತತ ಹೋರಾಟದ ಪ್ರತಿಫಲವಾಗಿ ಇಂದು ತಾಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆ ರೋಗ ತಜ್ಞರನ್ನು ಸರ್ಕಾರ ನೇಮಿಸಿದೆ.

ಈ ನೇಮಕಾತಿಗೆ ಸಹಕರಿಸಿದ ಜಿಲ್ಲಾಧಿಕಾರಿಗಳು ಹಾಗೂ ಶಿವಮೊಗ್ಗ ಡಿಎಚ್ಒ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿರವರು ಮಾತನಾಡಿ ತಾಲೂಕಿನ ಜನತೆ ಸೇರಿದಂತೆ ಸುತ್ತಮುತ್ತಲಿನ ತಾಲೂಕಿನ ಹಳ್ಳಿಗಳ ಆಗಮಿಸುವ ರೋಗಿಗಳಿಗೆ ವೈದ್ಯರ ಕೊರತೆಯಿಂದಾಗಿ ಅನ್ಯ ಜಿಲ್ಲೆಗಳನ್ನು ಅವಲಂಬಿಸಬೇಕಾಗಿತ್ತು, ಆದರೆ ಸಂಘಟನೆಯ ಸತತ ಎರಡು ವರ್ಷಗಳ ಹೋರಾಟದ ಪ್ರತಿಫಲವಾಗಿ ಈಗಲಾದರೂ ಸರ್ಕಾರ ಎಚ್ಚೆತ್ತು ವೈದ್ಯರ ಕೊರತೆ ನೀಗಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಹಾಗೆಯೇ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯ ಅರುಣ್ ಕುಮಾರ್ ರವರಿಗೂ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಹುಲಿಗಿ ಕೃಷ್ಣ, ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿ, ಇಮ್ರಾನ್, ಮತ್ತಿಕೋಟೆ ಮಾಲತೇಶ್, ತಾಲೂಕು ಗೌರವ ಅಧ್ಯಕ್ಷ ಹುಸೇನ್ ಸಾಬ್, ಆನಂದ್, ಹೋಟೆಲ್ ಉದ್ಯಮಿ ಅಕ್ಬರ್ ಆಲಿ, ಹರೀಶ್, ರಮೇಶ್, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...