ಶಿವಮೊಗ್ಗ | ಬೇಸಿಗೆಯಲ್ಲಿ ಮೃಗಾಲಯದ ಪ್ರಾಣಿಗಳಿಗೆ ‘ಐಸ್‌’ನಂತೆ ತಂಪಾದ ಉಪಚಾರ

Date:

ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿ ಪ್ರದೇಶದ ಅಧಿಕಾರಿಗಳು ಪ್ರಾಣಿಗಳನ್ನು ಬಿಸಿಲಿನ ತಾಪ ಮತ್ತು ಬಾಯಾರಿಕೆಯಿಂದ ರಕ್ಷಿಸಲು ಹಲವಾರು ಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಪ್ರಾಣಿಗಳನ್ನು ತಂಪಾಗಿಡಲು ಕೃತಕ ಕೊಳಗಳನ್ನು ರಚಿಸುವುದು, ಆವರಣದೊಳಗೆ ಜೆಟ್‌ಗಳನ್ನು ಸ್ಥಾಪಿಸುವುದು ಸೇರಿದಂತೆ ಪ್ರಾಣಿಗಳಿಗೆ ನೀಡುವ ಆಹಾರದಲ್ಲಿ ಸ್ವಲ್ಪ ಬದಲಾವಣೆ ಕ್ರಮಗಳನ್ನು ಕೈಗೊಂಡಿದ್ದಾರೆ.

“ಹುಲಿಗಳು ಯಾವಾಗಲೂ ನೀರನ್ನು ಇಷ್ಟಪಡುತ್ತವೆ. ಆದ್ದರಿಂದ ಕೊಳದಲ್ಲಿ ಯಾವಾಗಲು ನೀರು ತುಂಬಿರುವಂತೆ ನೋಡಿಕೊಳ್ಳುವುದರ ಜತೆಗೆ, ಹಲವು ಕೊಳಗಳನ್ನು ನಿರ್ಮಿಸಲಾಗಿದೆ. ಬಿಸಿಲಿನ ತಾಪ ಹೆಚ್ಚಾದಾಗ ಹುಲಿಗಳು ಕೊಳದ ಬಳಿ ಹೋಗಿ ಮಲಗುತ್ತವೆ” ಎಂದು ಸಫಾರಿಯ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದ್ದಾರೆ.

“ಸಫಾರಿಯಲ್ಲಿ ಪ್ರಾಣಿಗಳಿಗೆ ನೀರಿನ ಕೊರತೆಯಿಲ್ಲ. ಮಹಾನಗರ ಪಾಲಿಕೆಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿದ್ದು, ಇಲ್ಲಿ 2.5 ಲಕ್ಷ ಲೀಟರ್ ಓವರ್ ಹೆಡ್ ಟ್ಯಾಂಕ್ ಮತ್ತು 2 ಲಕ್ಷ ಲೀಟರ್ ನೀರಿನ ಸಂಪ್(ತೊಟ್ಟಿ) ಇದೆ. ಆದ್ದರಿಂದ ನಮ್ಮಲ್ಲಿ 4.5 ಲಕ್ಷ ಲೀಟರ್ ನೀರಿನ ಸಂಗ್ರಹವಿದೆ. ಸಾಂಬಾರ್ ಜಿಂಕೆಗಳು ಒದ್ದೆಯಾದ ಮಣ್ಣು ಮತ್ತು ನೀರನ್ನು ಇಷ್ಟಪಡುತ್ತವೆ. ಆದ್ದರಿಂದ ಕೊಳಗಳು ಯಾವಾಗಲೂ ನೀರಿನಿಂದ ತುಂಬಿರುವಂತೆ ನೋಡಿಕೊಳ್ಳಲಾಗುತ್ತದೆ” ಎಂದು  ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಡೆಮ್ಮೆ, ನೀರ್ಗುದುರೆ ಮತ್ತು ಇತರ ಸಸ್ಯಾಹಾರಿ ಪ್ರಾಣಿಗಳಿಗೆ ಕಲ್ಲಂಗಡಿ, ಮಸ್ಕ್ಮೆಲನ್, ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ತಾಜಾ ತರಕಾರಿಗಳನ್ನು ನೀಡಲಾಗುತ್ತದೆ. ಹೊಸ ಮೃಗಾಲಯದ ಆವರಣಗಳಲ್ಲಿ ನೀರಿನ ಜೆಟ್‌ಗಳಿವೆ. ಅವು ಮಳೆ ಹನಿ ಬೀಳುವಂತೆ ಕಾರ್ಯ ನಿರ್ವಹಿಸುತ್ತವೆ. ಇದರಿಂದ ಯಾವಾಗಲು ನೆಲದ ತಾಪಮಾನವಿರುತ್ತದೆ. ಪ್ರಾಣಿಗಳ ಮೇಲೂ ಕೂಡ ನೀರನ್ನು ಸಿಂಪಡಿಸುವುದರಿಂದ ಅವು ಆನಂದಿಸುತ್ತವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾರ್ವಜನಿಕ ಶೌಚಾಲಯವಿಲ್ಲದೆ ಹೈರಾಣು; ಕಚೇರಿ ಕೆಲಸಕ್ಕೆ ಬರುವವರ ಆಕ್ರೋಶ

“ಚಿರತೆಗಳು ಮತ್ತು ಇತರ ಮಾಂಸಾಹಾರಿ ಪ್ರಾಣಿಗಳಿಗೆ, ಮಾಂಸದ ತುಂಡುಗಳನ್ನು ನೀರಿನೊಂದಿಗೆ ಹೆಪ್ಪುಗಟ್ಟಿಸಿ ಐಸ್ ಚಪ್ಪಡಿಗಳಂತೆ ತಯಾರಿಸಲಾಗುತ್ತದೆ. ಪ್ರಾಣಿಗಳು ಮಾಂಸವನ್ನು ತಿನ್ನಲು ಪ್ರಯತ್ನಿಸಿದಾಗ, ಮಂಜುಗಡ್ಡೆಯ ರೂಪದಲ್ಲಿರುವ ನೀರನ್ನು ಕುಡಿಯುತ್ತವೆ. ಇದರಿಂದ ಅವುಗಳು ದೇಹವು ತಂಪಾಗಿರುತ್ತದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...