ಶಿವಮೊಗ್ಗ | ಭದ್ರಾ ನಾಲೆಗೆ ಬಿದ್ದ ಕಾರು; ಈಶ್ವರ್ ಮಲ್ಪೆ ತಂಡದಿಂದ ಶೋಧ ಕಾರ್ಯ, ಓರ್ವನ ಮೃತದೇಹ ಪತ್ತೆ

Date:

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಸಿಗುವ ಭದ್ರಾ ಬಲದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರು ದಾನವಾಡಿಯಿಂದ ನಾಗವಲ್ಲಿ ಗ್ರಾಮದೆಡೆಗೆ ತೆರಳುತ್ತಿದ್ದ ವೇಳೆ ನಾಲೆಗೆ ಉರುಳಿದೆ.

ಭದ್ರಾ ಜಲಾಶಯದಿಂದ ನಾಲೆಗೆ ನೀರು ಬಿಡುತ್ತಿರುವುದರಿಂದ ಚಾನಲ್​ನಲ್ಲಿ ಬರಪೂರ ನೀರು ಹರಿಯುತ್ತಿದ್ದು, ಕಾರು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಭದ್ರಾ ಚಾನಲ್​ ಇನ್ನೂ ಚಾನಲ್​ಗೆ ಬಿದ್ದ ಕಾರು ಹಾಗೂ ಅದರಲ್ಲಿದ್ದವರ ಪತ್ತೆಗಾಗಿ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಈ ನಡುವೆ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಸ್ಥಳಕ್ಕೆ ಬಂದು ಶೋಧ ಕಾರ್ಯಾಚರಣೆ ನಡೆಸಿತ್ತು. ದಿನವಿಡಿ ಕಾರ್ಯಾಚರಣೆ ನಡೆಸಿದ ಬಳಿ ಸ್ವಿಫ್ಟ್ ಡಿಸೇರ್ ಕಾರು ಹಾಗೂ ಭೋಜರಾಜ್ (32) ಎಂಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬಾಳೆಹೊನ್ನೂರಿನಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಮ್ಯಾನೇಜರ್ ಆಗಿದ್ದ ಬೋಜರಾಜ್​ ಆರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...