ಶಿವಮೊಗ್ಗ | ಶಾಲೆಗೆ ಬರುವಂತೆ ವಿಮಾನ ನಿಲ್ದಾಣದಲ್ಲಿ ಮಧು ಬಂಗಾರಪ್ಪಗೆ ಆಹ್ವಾನ ನೀಡಿದ ವಿದ್ಯಾರ್ಥಿನಿ

Date:

ಮಧು ಬಂಗಾರಪ್ಪಗೆ ಶಾಲೆಗೆ ಬರುವಂತೆ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲಿ ಆಹ್ವಾನ ನೀಡಿದ್ದು, ಅವರ ಜತೆಗೆ ಫೋಟೋ ತೆಗೆಸಿಕೊಂಡರು. ಅಲ್ಲದೆ ಸಚಿವರು ಪ್ರತಿ ಮಕ್ಕಳಿಗೂ ಹಸ್ತಲಾಘವ ನೀಡಿ, ಶಾಲೆಯಲ್ಲಿ ಸಿಗುವ ಸೌಕರ್ಯಗಳ ಬಗ್ಗೆ ವಿಚಾರಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇದೇ ಸಂದರ್ಭದಲ್ಲಿ ಉಂಬ್ಳೆಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಿಮಾನ ನಿಲ್ದಾಣ ಹಾಗೂ ವಿಮಾನದ ಹಾರಾಟವನ್ನು ತೋರಿಸುವ ಸಲುವಾಗಿ ಶಿಕ್ಷಕರು ಮಕ್ಕಳನ್ನು ಪ್ರವಾಸ ಕರೆದುಕೊಂಡು ಬಂದಿದ್ದರು.

ಅನಿರೀಕ್ಷಿತವಾಗಿ ಸಿಕ್ಕ ಸರ್ಕಾರಿ ಶಾಲೆಯ ಮಕ್ಕಳನ್ನು ಮಾತನಾಡಿಸಿದ ಮಧು ಬಂಗಾರಪ್ಪ ಅವರು ಮಕ್ಕಳನ್ನು ಮಾತನಾಡಿಸಿದ್ದು, ಊಟ ಮಾಡಿದ್ರಾ? ಮೊಟ್ಟೆ ಕೊಟ್ಟಿದ್ದಾರಾ ಎಂದೆಲ್ಲ ಪ್ರಶ್ನಿಸಿದ್ದಾರೆ. ಮಧು ಬಂಗಾರಪ್ಪನವರ ಮಾತುಗಳಿಗೆ ಮಕ್ಕಳು ಹೌದು ಸರ್‌ ಎಂದು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶಿವಮೊಗ್ಗ ಶಾಲೆ ಮಕ್ಕಳು

ಸಚಿವರ ಪ್ರಶ್ನೆಗಳಿಗೆ ಅಂಜದೆ ಉತ್ತರಿಸಿದ ಮಕ್ಕಳು ನಿಮ್ಮನ್ನು ನೋಡುತ್ತಿರುವುದು ಖುಷಿಯಾಗಿದೆ ಸರ್‌ ಎಂದಾಗ, ಇದಕ್ಕೆ ಪ್ರತಿಯಾಗಿ ಸಚಿವರೂ ಕೂಡಾ ನಿಮ್ಮನ್ನೆಲ್ಲಾ ಭೇಟಿಯಾಗಿ ನನಗೂ ಸಂತೋಷವಾಗಿದೆ ಮಕ್ಕಳೇ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ʼಬಸವ ಉತ್ಸವʼ ಮರೆಯಿತೇ ರಾಜ್ಯ ಸರ್ಕಾರ?

ಈ ನಡುವೆ ವಿದ್ಯಾರ್ಥಿನಿಯೊಬ್ಬರು, “ಸರ್ ನೀವು ತುಂಬಾ ಕ್ಯೂಟ್‌ ಆಗಿದ್ದೀರ” ಎಂದಾಗ ನಕ್ಕ ಸಚಿವರು, ನೀನೂ ಕೂಡಾ ಕ್ಯೂಟ್‌ ಆಗಿದ್ದೀಯಾ ಎಂದರು. ಇದರ ಬೆನ್ನಲ್ಲೆ ವಿದ್ಯಾರ್ಥಿನಿಯೊಬ್ಬರು ʼಬನ್ನಿ ಸಾರ್‌ ಈಗ ನಮ್ಮ ಶಾಲೆಗೆ ಹೋಗಣವೆಂದು ಸ್ಥಳದಲ್ಲಿಯೇ ಆಹ್ವಾನ ನೀಡಿದಳು. ಪ್ರತಿಯಾಗಿ ನಕ್ಕ ಸಚಿವರು, ಇಲ್ಲಮ್ಮ ಈಗ ಬೇರೆ ಕೆಲಸವಿದೆ ನಾನು ಹೋಗಬೇಕೆಂದು ವಿದ್ಯಾರ್ಥಿನಿಗೆ ತಿಳಿಸಿದರು.

ಮಕ್ಕಳ ಜತೆಗೆ ಕೆಲಕಾಲ ನಗುತ್ತ ಕಾಲ ಕಳೆದ ಸಚಿವರು, ರಾಜಕಾರಣ ಬದಿಗಿಟ್ಟು ಮಕ್ಕಳ ಜತೆಗೆ ತಮಾಷೆ ಮಾಡಿಕೊಂಡು ವಿಮಾನ ಬರುವವರೆಗೂ ಕಾದರು. ಅದೇ ಸಮಯದಲ್ಲಿ ವಿಮಾನವೊಂದು ಶಿವಮೊಗ್ಗ ಏರ್‌ಫೋರ್ಟ್‌ಗೆ ಬಂದು ಇಳಿಯಿತು. ವಿಮಾನ ಲ್ಯಾಂಡಿಂಗ್‌ ಆಗುವುದನ್ನು ಕಂಡ ವಿದ್ಯಾರ್ಥಿಗಳು ವಿಶೇಷವಾಗಿ ಸಂಭ್ರಮಿಸಿದರು. ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತ ವಿಮಾನದ ವರ್ಣನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...