ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ; ಥಳಿತ

Date:

ಶಿವಮೊಗ್ಗದ ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೊ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ.

ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೊ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ. ಹಣ ಕೊಡದಿದ್ದರೆ ವಿಡಿಯೊ ಹರಿಬಿಡುವುದಾಗಿ ಬೆದರಿಸಲಾಗಿದೆ. ಈ ವೇಳೆ ಯುವತಿ ಬಳಿ ಇದ್ದ ₹24,000 ಹಣ, ಗೂಗಲ್ ಪೇ ಮೂಲಕ ಯುವಕನಿಂದ ₹1500 ವರ್ಗಾಯಿಸಿಕೊಂಡಿದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್‌ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂಪಾಯಿ ಹಣ ಕೊಡದಿದ್ದರೆ ವಿಡಿಯೊ ಹರಿಬಿಡುವುದಾಗಿ ಬೆದರಿಕೆ ಒಡ್ಡಿದಾರೆಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಿಂಚಣಿ ಕೊಡುಗೆಗಾಗಿ ವಿದ್ಯುತ್ ದರ ಹೆಚ್ಚಳ; ಸಾರ್ವಜನಿಕರ ಆಕ್ರೋಶ

ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಬೆದರಿಸಿದ್ದರು. ₹6000 ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ₹6000 ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಪೀಡಿಸಿದ್ದು, ಜೀವ ಬೆದರಿಕೆ ಒಡ್ಡಿದ್ದಾರೆಂದು ಆಪಾದಿಸಲಾಗಿದೆ.

ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...