ಶಿವಮೊಗ್ಗ | ಸಿಗ್ನಲ್‌ ಲೈಟ್ ಅಳವಡಿಸುವಂತೆ ಎಎಪಿ ಆಗ್ರಹ

Date:

ಶಿವಮೊಗ್ಗದ ಎನ್‌ಬಿ ರಸ್ತೆ, ಟೆಂಪೋ ಸ್ಟ್ಯಾಂಡ್ ಬಳಿಯ ವೃತ್ತದಲ್ಲಿ ಟ್ರಾಫಿಕ್ ಅವ್ಯವಸ್ಥೆ ಹಾಗೂ ಸಿಗ್ನಲ್‌ಲೈಟ್ ಅಳವಡಿಸದೇ ಅಪಘಾತಗಳಿಗೆ ಕಾರಣವಾಗುತ್ತಿರುವುದರಿಂದ ಕೂಡಲೇ ಟ್ರಾಫಿಕ್ ವ್ಯವಸ್ಥೆಯನ್ನು ಸುರಕ್ಷಿತಗೊಳಿಸುವಂತೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ(ಎಎಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ಆಮ್ ಅದ್ದಿ ಪಾರ್ಟಿಯಿಂದ ಕಳೆದ ಅಕ್ಟೋಬರ್‌ 31ರಂದು ಟ್ರಾಫಿಕ್‌ ಅವ್ಯವಸ್ಥೆಯ ಕುರಿತು ಪ್ರತಿಭಟನೆ ನಡೆಸಿದ್ದು, ಟೆಂಪೋ ಸ್ಟ್ಯಾಂಡ್‌ ಬಳಿಯ ವೃತ್ತದಲ್ಲಿ ಸಿಗ್ನಲ್‌ ಅಳವಡಿಸುವಂತೆ ಹಲವು ಮನವಿ ಮಾಡಿದ್ದೆವು. ಆದರೂ, ಈವರೆಗೆ ಜಿಲ್ಲಾಧಿಕಾರಿ, ಟ್ರಾಫಿಕ್ ನಿಯಂತ್ರಣ ಅಧಿಕಾರಿಗಳು, ಯಾವುದೇ ಗಂಭೀರ ನಿರ್ಧಾರ ಅಥವಾ ಸೂಕ್ತಕ್ರಮ ವಹಿಸದೇ ಇರುವುದು ಖಂಡನೀಯ. ಇದರಿಂದ ಹಲವಾರು ರಸ್ತೆ ಅಪಘಾತಗಳು ಸಂಭವಿಸಿ ಪ್ರಾಣಹಾನಿ ಸಂಭವಿಸಿರುತ್ತವೆ” ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

“ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಂಗಳವಾರದಂದು ಮತ್ತೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಗ್ನಲ್ ಲೈಟ್ ಆಳವಡಿಸಿ ಟ್ರಾಫಿಕ್ ಅವ್ಯವಸ್ಥೆ ಸರಿಪಡಿಸಬೇಕು. ಟ್ರಾಫಿಕ್‌ ಸುವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಮೊಗ್ಗ ನಗರದ ಮುಖ್ಯ ಭಾಗಗಳಾದ ಗಾಡಿಕೊಪ್ಪ, ಟೆಂಪೋ ಸ್ಟ್ಯಾಂಡ್, ಸೂಳೆಬೈಲು, ನ್ಯೂಮಂಡ್ಲಿ ಎಂಆರ್‌ಎಸ್ ಸರ್ಕಲ್, ಇಲ್ಯಾಸ್ ನಗರ ಸರ್ಕಲ್ ಇನ್ನೂ ಹಲವು ಭಾಗಗಳಲ್ಲಿ ನಿತ್ಯವೂ ಅತಿ ಹೆಚ್ಚು ವಾಹನ ದಟ್ಟಣೆಯಾಗುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಮೀಪದಲ್ಲಿಯೇ ಶಾಲೆಗಳಿದ್ದು, ಮಕ್ಕಳಿಗೆ, ಪಾದಚಾರಿಗಳಿಗೆ, ನಾಗರಿಕರಿಗೆ ಓಡಾಡಲು ಅನಾನುಕೂಲವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಎಂಜಿನಿಯರಿಂಗ್, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಆಗ್ರಹ

“ಟ್ರಾಫಿಕ್‌ ಸಿಗ್ನಲ್‌ ವ್ಯವಸಾಥೆ ಇಲ್ಲದಿರುವುದರಿಂದ ರಸ್ತೆ ದಾಟುವ ಸಂದರ್ಭದಲ್ಲಿ ಹಲವು ರೀತಿಯ ವಾಹನ ಅಫಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಶಿವಮೊಗ್ಗ ಜಿಲ್ಲಾ ಆಮ್ ಆದಿ ಪಾರ್ಟಿ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...