ಶಿವಮೊಗ್ಗ | ವಾಹನ ಸಂಚಾರ ದಟ್ಟಣೆ ಬಗೆಹರಿಸುವಂತೆ ಎಎಪಿ ಆಗ್ರಹ

Date:

ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಬಗೆಹರಿಸುವಂತೆ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಆಮ್ ಆದಿ ಪಾರ್ಟಿ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, “ಇತ್ತೀಚಿನ ಕೆಲವು ತಿಂಗಳುಗಳಿಂದ ಎನ್‌ ಟಿ ರಸ್ತೆ, ಟೆಂಪೋಸ್ಟಾಂಡ್ ಬಳಿ ಟ್ರಾಫಿಕ್ ಹೆಚ್ಚಾಗಿದ್ದು, ಸಾಕಷ್ಟು ರಸ್ತೆ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳೂ ಆಗಿವೆ. ಈ ಸ್ಥಳದ ಅಕ್ಕಪಕ್ಕದಲ್ಲಿ ಪ್ರಾಥಮಿಕ ಶಾಲೆ ಹಾಗೂ ಕಾಲೇಜು ಇದ್ದು, ಈ ಟೆಂಪೋ ಸ್ಟ್ಯಾಂಡೇ ವಿದ್ಯಾರ್ಥಿಗಳ ಬಸ್ ನಿಲ್ದಾಣವಾಗಿದೆ” ಎಂದರು.

“ಅದೇ ರಸ್ತೆ ಮಾರ್ಗವಾಗಿ ಅನೇಕ ಪ್ರತಿಷ್ಠಿತ ಆಸ್ಪತ್ರೆಗಳಾದ ನಾರಾಯಣ ಹೃದಯಾಲಯ, ಶಂಕರ್ ಕಣ್ಣಿನ ಆಸ್ಪತ್ರೆ ಹಾಗೂ ಪಿಯರ್‌ಲೈಟ್‌ ಕಾರ್ಖಾನೆಯೂ ಇದ್ದು, ಪಕ್ಕದಲ್ಲಿ ಕೃಷಿ ಇಲಾಖೆ ಕಚೇರಿ ಇದೆ. ಆರ್‌ಎಂಎಲ್ ನಗರದ 1ನೇ ಹಂತ, 2ನೇ ಹಂತದ ಬಡಾವಣೆಯ ಮುಖ್ಯ ರಸ್ತೆಯಾಗಿದೆ. ಈ ವೃತ್ತದಲ್ಲಿ ಯಾವುದೇ ತರಹದ ಸಂಚಾರಿ ನಿಯಮಗಳು ಪಾಲನೆ ಆಗುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ; ತೀವ್ರ ಚರ್ಚೆ

ಜಿಲ್ಲಾಧಿಕಾರಿಯವರು ಈ ಬಗ್ಗೆ ಗಮನ ಹರಿಸಿ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರಬೇಕು. ಸಾರ್ವಜನಿಕರಿಗೆ ಉಂಟಾಗುತ್ತಿರುವ ಅನಾನುಕೂಲತೆಯ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಂಡು ಟ್ರಾಫಿಕ್ ಸಿಗ್ನಲ್ ಲೈಟ್ ಆಳವಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಶಿವಕುಮಾರ್ ಗೌಡ್ರು, ನಜೀರ್ ಅಹಮದ್, ಸುರೇಶ್ ಕೌಟೆಕಾರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...