ಶಿವಮೊಗ್ಗ | ದೇಶದ ಅಪರೂಪದ ಮಹಾನಾಯಕ ಅಂಬೇಡ್ಕರ್:‌ ದೂಗೂರು ಪರಮೇಶ್ವರ್

Date:

ದೇಶದ ಅಪರೂಪದ ನಾಯಕ ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರಿಗೆ ಅನುಕೂಲವಾಗುವಂತಹ ಕಾನೂನು ಜಾರಿ ಮಾಡಿದಂತಹ ಮಹಾನಾಯಕ ಅಂಬೇಡ್ಕರ್‌ ಎಂದು ಡಿಎಸ್‌ಎಸ್‌ ಕರ್ನಾಟಕ ರಾಜ್ಯ ಬೆಂಗಳೂರು ವಿಭಾಗೀಯ ಸಂಚಾಲಕ ದೂಗೂರು ಪರಮೇಶ್ವರ್ ನೆನಪಿಸಿಕೊಂಡರು.

ಶಿವಮೊಗ್ಗ ಜಿಲ್ಲೆಯ ಸಾಗರದ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಡಾ. ಬಿ ಆರ್‌ ಅಂಬೇಡ್ಕರ್‌ ಅವರು ಸಂವಿಧಾನದ ಮುಖಾಂತರ ಇಡೀ ದೇಶದಲ್ಲಿಯ ಪ್ರತಿಯೊಂದು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸ್ವಾಭಿಮಾನದಿಂದ ಬದುಕುವಂಥ ಹಕ್ಕನ್ನು ನೀಡಿದ್ದಾರೆ. ಇಂತಹ ಸಂವಿಧಾನವನ್ನು ಅಲ್ಲಗಳೆಯುತ್ತಿರುವಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರ ಎಂಬಾತ ಮುಸಲ್ಮಾನರ ಮತದಾನದ ಹಕ್ಕನ್ನು ತೆಗೆಯಬೇಕು ಎಂದರೆ, ಉಡುಪಿ ಮಠದ ಪ್ರಸನ್ನತೀರ್ಥ ಸ್ವಾಮೀಜಿ ನಮನ್ನು ಗೌರವಿಸುವ ಸಂವಿಧಾನ ಬರಬೇಕು ಎನ್ನುತ್ತಾರೆ. ಇವರೆಲ್ಲರೂ ಮೊದಲು ಸಂವಿಧಾನವನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶದಲ್ಲಿ ಸೌಹಾರ್ದ, ಸಮಾನತೆ ತರುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಪ್ರೊ. ಲೋಕೇಶ್

“ಭಾರತ ದೇಶ ಜಾತ್ಯತೀತ ರಾಷ್ಟ್ರವಾಗಿದೆ. ಎಲ್ಲ ಜಾತಿ ವರ್ಗದವರಿಗೆ ಎಲ್ಲ ರೀತಿಯ ಹಕ್ಕುಗಳಿವೆ. ಸಂವಿಧಾನ ಬದಲಾವಣೆ ಮಾಡಬೇಕೆಂದು ಹೇಳುವ, ಸಂವಿಧಾನದ ಬಗ್ಗೆ ಗೌರವ ಇಲ್ಲದ ಸ್ವಾಮೀಜಿಗಳಾಗಲಿ, ಸಾಮಾನ್ಯರಾಗಲಿ, ಕುಬೇರರಾಗಲೀ ದೇಶ ಬಿಟ್ಟು ಬೇರೆ ದೇಶಕ್ಕೆ ಹೋಗಲಿ. ಸಂವಿಧಾನ ಒಪ್ಪದೇ ಇರುವವರಿಗೆ ಭಾರತದಲ್ಲಿ ಇರಲು ಯಾವ ಯೋಗ್ಯತೆಯೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಜುನಾಥ್, ಧರ್ಮಣ್ಣ ಕೆಳದಿಪುರ, ಪ್ರಭಾಕರ್ ಸಾಗರ, ಗಣಪತಿಯಪ್ಪ, ತಾರಮೂರ್ತಿ, ನಂದಿನಿ, ಸುನಿಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...