ಶಿವಮೊಗ್ಗ | ಅಮ್ಜದ್ ಕೊಲೆ ಆರೋಪಿ, ರೌಡಿ ಶೀಟರ್ ಅಕ್ಬರ್ ಕಾಲಿಗೆ ಪೊಲೀಸ್ ಗುಂಡೇಟು

Date:

ಶಿವಮೊಗ್ಗ, ಕೊಲೆ ಆರೋಪಿ ರೌಡಿ ಶೀಟರ್ ಕಾಲಿಗೆ ಪೊಲೀಸರು, ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪದ ಮೇರೆಗೆ, ರೌಡಿ ಶೀಟರ್ ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ, ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 8 ರಂದು ನಡೆದಿದೆ.ನ್ಯೂ ಮಂಡ್ಲಿ ಬಡಾವಣೆ ನಿವಾಸಿ ಅಕ್ಬರ್ (21) ಬಂಧಿತ ರೌಡಿ ಶೀಟರ್ ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಹಾಗೂ ಈತನ ದಾಳಿಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ ಎಂ ಎಲ್ ನಗರದ ಬಳಿ ಇತ್ತೀಚೆಗೆ, ಅಮ್ಜದ್ ಹಾಗೂ ಆತನ ಸ್ನೇಹಿತರೋರ್ವರ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಮ್ಜದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಆರೋಪಿಯಾಗಿದ್ದ ಅಕ್ಬರ್, ಘಟನೆಯ ನಂತರ ತಲೆಮರೆಸಿಕೊಂಡಿದ್ದ. ಪುರಲೆ ಬಳಿ ಆರೋಪಿಯಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.ಈ ವೇಳೆ ಆರೋಪಿಯು ಚಂದ್ರಾನಾಯ್ಕ್ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಮುಂದಾಗಿದ್ದ.

ತಕ್ಷಣವೇ ಸ್ಥಳದಲ್ಲಿದ್ದ ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ ರವರು, ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಎಚ್ಚರಿಕೆ ನೀಡಿದ್ದಾರೆ.ಆದಾಗ್ಯೂ ಆರೋಪಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...