ಶಿವಮೊಗ್ಗ | ಆರಗ ಜ್ಞಾನೇಂದ್ರ ಹೇಳಿಕೆ ಬಿಜೆಪಿ ಸಿದ್ಧಾಂತವನ್ನು ಪ್ರತಿಪಾದಿಸುತ್ತದೆ: ಕಿಮ್ಮನೆ ರತ್ನಾಕರ್

Date:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ ಖಂಡ್ರೆ ಅವರ ಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ. ಅವರ ಮಾತುಗಳು ಜಾತಿ, ಧರ್ಮ, ಸಮುದಾಯಗಳನ್ನು ದ್ವೇಷಿಸುವ ಬಿಜೆಪಿಯ ಸಿದ್ಧಾಂತಗಳನ್ನು ಪ್ರತಿಪಾದಿಸುತ್ತವೆ ಎಂದು ಕಾಂಗ್ರೆಸ್‌ ನಾಯಕ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “ಆರಗ ಜ್ಞಾನೇಂದ್ರ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಬಾಯ್ತಪ್ಪಿನಿಂದ ಖರ್ಗೆ ಅವರ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ ಎಂದರೆ ನಂಬಲಾಗದು. ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿರುವ ಅವರ ಶಾಸಕ ಸ್ಥಾನವನ್ನು ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಯಾವ ಬಿಜೆಪಿ ನಾಯಕರೂ ಖಂಡಿಸಿಲ್ಲ. ಬಿಜೆಪಿಗರ ಮೌನ, ಜಾನೇಂದ್ರ ಅವರ ಹೇಳಿಕೆಯನ್ನು ಸಮರ್ಥಿಸುವಂತಿದೆ. ಈ ಹಿಂದೆ ಸಂಸದ ಅನಂತ ಕುಮಾರ್ ಹೆಗೆಡೆ ಅವರು ಸಂವಿಧಾನದ ವಿರುದ್ಧ ಮಾತನಾಡಿದಾಗಲೂ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಓಟುಗಳೇ ಬೇಡವೆಂದು ದ್ವೇಷದ ಹೇಳಿಕೆ ನೀಡಿದಾಗಲೂ ಬಿಜೆಪಿಗರು ಮೌನವಾಗಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಸ್ತೂರಿ ರಂಗನ್‌ ವರದಿಯನ್ನು ಬಿಜೆಪಿಗರು ಒಪ್ಪಿಕೊಂಡಿದ್ದಾರೆ. ಆದರೆ, ಮತದಾರರನ್ನು ಮಂಗ ಮಾಡಲು ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಕಾಂಗ್ರೆಸ್ ವಿರೋಧಿಸಿತ್ತು. ಆದರೆ, ಆ ವರದಿಯನ್ನು ಮೋದಿ ಸರ್ಕಾರ ಅದನ್ನು ಒಪ್ಪಿಕೊಂಡಿದೆ. ಪ್ರತಿಭಟನೆ ಮಾಡುವುದಿದ್ದರೆ ಮೋದಿ ವಿರುದ್ದ ಮಾಡಲಿ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...