ಶಿವಮೊಗ್ಗ | ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Date:

ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನಿ ನಗರ ಪೊಲೀಸರು ಬಂಧಿಸಿದ್ದಾರೆ.

ವಿನೋಬನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಜೆ ಎಚ್‌ ಪಟೇಲ್‌ ಬಡಾವಣೆ ತುಂಗಾ ಚಾನಲ್‌ ದಂಡೆ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಐಪಿಎಸ್‌ ಮಿಥುನ್‌ ಕುಮಾರ್‌ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಸಾಗರ ಮೂಲದ ಪ್ರತಾಪ್‌‌ ಎಸ್ (26) ಬಂಧಿತ ಆರೋಪಿ. ಈತನಿಂದ ₹6,000 ಮೌಲ್ಯದ 349 ಗ್ರಾಂ ತೂಕದ ಒಣ ಗಾಂಜಾ, ₹600 ನಗದು ಹಣ, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್ ಫೋನ್, ದ್ವಿ ಚಕ್ರ ವಾಹನ ಸೇರಿದಂತೆ ಒಟ್ಟು ₹34,600ಗಳ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 04 at 11.40.37 AM

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ದೂರು ಬಂದರೆ ಕೂಡಲೇ ಕ್ರಮವಹಿಸಿ: ಅನಿಲ್‌ ಭೂಮರೆಡ್ಡಿ

ಎರಡನೇ ಪ್ರಕರಣ.. ಕೀರ್ತಿ ನಗರದ ದೇವಂಗಿ ಪಾರ್ಕ್‌ನಲ್ಲಿ ಸುರೇಂದ್ರ ಅಲಿಯಾಸ್ ಬಬ್ಲು (30) ಎಂಬಾತ ಮಾದಕ ಗಾಂಜಾ ಮಾರುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನಿಂದ ₹5,000 ಮೌಲ್ಯದ 363 ಗ್ರಾಂ ತೂಕದ ಒಣ ಗಾಂಜಾ, ₹500 ನಗದು, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್ ಪೋನ್ ಸೇರಿದಂತೆ ಒಟ್ಟು ₹20,500 ಗಳ ಮಾಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...