ಶಿವಮೊಗ್ಗ | ಪೊಲೀಸರಿಂದ ಹಲ್ಲೆ ಆರೋಪ; ನೊಂದ ಯುವಕ ಆತ್ಮಹತ್ಯೆ

Date:

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಅತನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನ ನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಕೊನ್ನೆಕೊಪ್ಪ ಗ್ರಾಮದ ನಿವಾಸಿ ಮಂಜುನಾಥ್ (28) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಜೂನ್ 11ರಂದು ಹೊಳೆಹೊನ್ನೂರಿನಲ್ಲಿ ಪೊಲೀಸ್‌ ಸಿಬ್ಬಂದಿಗಳು ಆತನ ಮೇಲೆ ಸಾರ್ವಜನಿಕವಾಗಿ ಥಳಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಮಂಜುನಾಥ್‌ ಪತ್ನಿ ಪೊಲೀಸ್‌ ಠಾನೆಯಲ್ಲಿ ದೂರು ನೀಡಿದ್ದು, ತನ್ನ ಪತಿಯ ಸಾವಿಗೆ ಪೊಲೀಸರೇ ಕಾರಣ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೂನ್ 11ರಂದು ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಎದುರು ಮಂಜುನಾಥ್ ನಿಂತಿದ್ದರು. ಈ ವೇಳೆ, ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ, ವಿನಾಕಾರಣ ಮಂಜುನಾಥ್‌ಗೆ ಥಳಿಸಿ, ಪೊಲೀಸ್‌ ಠಾಣೆಗೆ ಎಳೆದೊಯ್ದರು. ಅಂದು ಸಂಜೆ ಅವರ ತಮ್ಮ ಹೋಗಿ ಬಿಡಿಸಿಕೊಂಡು ಬಂದರು” ಎಂದು ಮಂಜುನಾಥ್‌ ಪತ್ನಿ ವಿವರಿಸಿದ್ದಾರೆ.

“ಘಟನೆಯಿಂದ ದಿಗ್ಭ್ರಾಂತನಾಗಿದ್ದ ಮಂಜುನಾಥ್​ ಖಿನ್ನತೆಗೆ ಒಳಗಾಗಿದ್ದರು. ಜೂನ್ 15ರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...