ಶಿವಮೊಗ್ಗ | ರೆಸಾರ್ಟ್‌ ಮೇಲೆ ದಾಳಿ; ಮದ್ಯದ ಬಾಟಲಿ, ಪ್ರಾಣಿಗಳ ಕೊಂಬು, ಬಂದೂಕು ವಶ

Date:

ಅಕ್ರಮ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ರೆಸಾರ್ಟ್ ಒಂದರ ಮೇಲೆ ಕಳೆದ ರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿದ ವೇಳೆ ಮದ್ಯದ ಬಾಟಲಿಗಳು, ಪ್ರಾಣಿಗಳ ಕೊಂಬು, ಬಂದೂಕು ಪತ್ತೆಯಾಗಿವೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿಹಂಗಮನ ರೆಸಾರ್ಟ್ ಮೇಲೆ ಶನಿವಾರ ರಾತ್ರಿ ಪೊಲೀಸರು ಹಠಾತ್ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 1 ಲಕ್ಷ ರೂ. ಮೌಲ್ಯದ ಒಂದು ಡಬಲ್ ಬ್ಯಾರಲ್ ಬಂದೂಕು, ಅಂದಾಜು 25 ಸಾವಿರ ರೂ. ಮೌಲ್ಯದ 310 ಜೀವಂತ ಗುಂಡುಗಳು, ಒಂದು ಕತ್ತಿ, ಒಂದು ಚಾಕು, ಮೂರು ಕಾಡುಕೋಣದ ಕೊಂಬಿನ ಟ್ರೋಫಿ, ಆರು ಜಿಂಕೆ ಕೊಂಬಿನ ಟ್ರೋಫಿ, ಒಂದು ಸಿಸಿಟಿವಿ ಡಿವಿಆರ್, 7,650 ರೂ. ಮೌಲ್ಯದ 51 ಬಿಯರ್ ಟಿನ್‌ಗಳು, 1 ಲಕ್ಷ ರೂ. ಮೌಲ್ಯದ ಮದ್ಯ ತುಂಬಿದ ಬಾಟಲಿಗಳು, 750 ರೂ. ಮೌಲ್ಯದ ಬ್ರೀಸರ್ ಬಾಟಲ್ ಹಾಗೂ 3 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಕಾಲ್ನಡಿಗೆ ಜಾಥಾ

ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ, ತೀರ್ಥಹಳ್ಳಿ ಇನ್ಸ್‌ಪೆಕ್ಟರ್ ಅಶ್ವತ್ಥ ಗೌಡ ನೇತೃತ್ವದಲ್ಲಿ ದಾಳಿಯಾಗಿದೆ. ತೀರ್ಥಹಳ್ಳಿ ಸಬ್ ಇನ್ಸ್‌ಪೆಕ್ಟರ್ ಸಾಗರ ಅತ್ತರವಾಲ, ಮಾಳೂರು ಸಬ್ ಇನ್ಸ್‌ಪೆಕ್ಟರ್ ನವೀನ್ ಮಠಪತಿ, ಆಗುಂಬೆ ಸಬ್ ಇನ್ಸ್‌ಪೆಕ್ಟರ್ ರಂಗನಾಥ ಅಂತರಗಟ್ಟಿ, ರಿಪ್ಪನ್‌ಪೇಟೆ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಹಾಗೂ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...