ಶಿವಮೊಗ್ಗ | ಆಟೋ ಚಾಲಕರ ಮಗಳಿಗೆ ಒಲಿದ 2 ಚಿನ್ನದ ಪದಕ

Date:

ಭದ್ರಾವತಿ ತಾಲೂಕು ಅರಳಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಗುಲ್ತಾಜ್‌ ಖಾನಂ ಎರಡು ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ.

ಗ್ರಾಮದ ಸಾಮಾನ್ಯ ಆಟೋ ಚಾಲಕ ರಫೀಕ್ ಖಾನ್ ಹಾಗೂ ಜಹೀದಾ ಬಾನು ದಂಪತಿಯ ಮಗಳು ಗುಲ್ತಾಜ್ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ 34ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್‌ ಅವರಿಂದ 2 ಚಿನ್ನದ ಪದಕ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಕುವೆಂಪು ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಗುಲ್ತಾಜ್ ಶಿಕ್ಷಣ (ಎಜುಕೇಶನ್) ವಿಭಾಗದಲ್ಲಿ ಪ್ರಥಮ ರಾಂಕ್ ಪಡೆದಿದ್ದಾರೆ.

ಗುಲ್ತಾಜ್ ಖಾನಂ ಈದಿನ ಡಾಟ್‌ ಕಾಂನೊಂದಿಗೆ ತಮ್ಮ ಸಂತೋಷ ಹಂಚಿಕೊಂಡರು. “ತಂದೆ ಆಟೋ ಚಾಲಕ ಹಾಗೂ ತಾಯಿ ಗೃಹಿಣಿ, ಇಬ್ಬರು ಸಹೋದರ ಹಾಗೂ ಒಬ್ಬರು ಸಹೋದರಿಯಿದ್ದಾರೆ. ಇವರೆಲ್ಲರ ಸಹಕಾರದಿಂದ ಎರಡು ಚಿನ್ನದ ಪದಕ ಪಡೆಯಲು ಸಾಧ್ಯವಾಯಿತು. ಕುಟುಂಬದ ಸಹಕಾರ ಎಷ್ಟು ಮುಖ್ಯವೋ ವೈಯಕ್ತಿಕ ಪರಿಶ್ರಮ ಕೂಡ ಅಷ್ಟೇ ಮುಖ್ಯವಾಗುತ್ತದೆ. ಓದಿನಲ್ಲಿ ಗುರಿ, ಶ್ರದ್ಧೆ, ಕಠಿಣ ಪರಿಶ್ರಮ ಇರುವ ಪ್ರತಿಯೊಬ್ಬರೂ ಈ ಸಾಧನೆ ಮಾಡಬಹುದು. ನಾನು ಪ್ರಸ್ತುತ ಪಿ ಎಚ್‌ ಡಿ ವ್ಯಾಸಂಗ ಮಾಡುತ್ತಿದ್ದೇನೆ. ಮತ್ತಷ್ಟು ಸಾಧಿಸುವ ಗುರಿ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001178184 1

“ಚಿನ್ನದ ಪದಕ ಪಡೆದಿರುವುದು ಕುಟುಂಬದಲ್ಲಿ, ಸ್ನೇಹಿತರ ಬಳಗದಲ್ಲಿ ಸಂತಸ ಉಂಟುಮಾಡಿದೆ. ನನ್ನ ಈ ಸಾಧನೆಗೆ ಬೆನ್ನೆಲುಬಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕುಲಪತಿ ಶರತ್ ಅನಂತ್ ಮೂರ್ತಿ, ಹಿರಿಯ ಉಪನ್ಯಾಸಕ ಡಾ. ಎಸ್ ಎಸ್ ಪಾಟೀಲ್, ಡಾ. ಗೀತಾ ಸಿ, ಡಾ. ಸತ್ತಾರ ಖಾನ್, ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಜೀವ್ ಗಾಂಧಿ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಅರಳಿಹಳ್ಳಿ ಗ್ರಾಮದ ಸರ್ಕಾರಿ ಶಾಲೆ ವತಿಯಿಂದ ಹೀಗೆ ಎಲ್ಲರೂ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಇವರೆಲ್ಲ ಪ್ರೋತ್ಸಾಹ ನನ್ನಲ್ಲಿ ಮತ್ತಷ್ಟು ಸ್ಪೂರ್ತಿ ತುಂಬಿದೆ” ಎಂದು ಸಂತೋಷ್ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಈದಿನ ಇಂಪ್ಯಾಕ್ಟ್; ಬಡ ಕುಟುಂಬದ ನೆರವಿಗೆ ಧಾವಿಸಿದ ಕರವೇ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...