ಶಿವಮೊಗ್ಗ | ಭಗವಾನ್ ಬಿರ್ಸಾ ಮುಂಡಾ ಜಯಂತಿ

Date:

ಬ್ರಿಟಿಷರು ಭಾರತೀಯರ ಮೇಲೆ ದಬ್ಬಾಳಿಕೆ ಮಾಡಲು ಶುರು ಮಾಡಿದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಸಿಡಿದೆದ್ದ ಒಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯೇ ಭಗವಾನ್ ಬಿರ್ಸಾ ಮುಂಡಾರವರು ಎಂದು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸಣ್ಣಹನುಮಂತಪ್ಪ ಜಿ ತಿಳಿಸಿದರು.

ಶಿವಮೊಗ್ಗದ ನೆಹರು ಯುವ ಕೇಂದ್ರ, ಭಾರತ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಾಗರ್ ಯೂತ್ ಫೋರ್ಸ್ ಅಸೋಸಿಯೇಷನ್‌ನೊಂದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಭಗವಾನ್ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಭಾರತ ಆಳಿಸಿಕೊಳ್ಳುವ ದೇಶವೇ ಹೊರತು ಆಳುವ ದೇಶವಲ್ಲವೆಂದು ತಿಳಿದ ಬ್ರಿಟಿಷರು ಭಾರತದ ಮೇಲೆ ದಬ್ಬಾಳಿಕೆ ನಡೆಸಲು ಆರಂಭಿಸಿದಾಗ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಲಕ್ಷಾಂತರ ಮಂದಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅದರಲ್ಲಿ ವಿಶೇಷವಾಗಿ ಬುಡಕಟ್ಟು ಜನಾಂಗದವರು ಮತ್ತು ಅಲೆಮಾರಿ ಜನಾಂಗದವರು ಕಾಡಿನಲ್ಲಿ ಕಾಡುಪಾಪಗಳಂತೆ ಜೀವನ ನಡೆಸುತ್ತಿದ್ದರು. ಪರಿಸರದ ಜತೆಗೆ ತಮ್ಮ ಜೀವನ ಕಳೆಯುತ್ತಿದ್ದರು. ಇಂತಹ ಜನಾಂಗದವರ ಮೇಲೆ ಮೇಲೆ ಬ್ರಿಟಿಷರು ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಭಗವಾನ್ ಬಿರ್ಸಾ ಮುಂಡಾ ಅವರು ಒಂದು ಗುಂಪುಕಟ್ಟಿಕೊಂಡು ಬ್ರಿಟಿಷರ ಅಟ್ಟಹಾಸ ಮುರಿಯಲು ಮುಂದಾದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿರ್ಸಾ ಮುಂಡಾ ಅವರು ಅಕ್ಷರಶಃ ಯಾವುದೇ ಹೆಸರಿಗಾಗಲಿ, ಕೀರ್ತಿಗಾಗಲಿ ಹೋರಾಟ ಮಾಡಿದವರಲ್ಲ. ತಮ್ಮ ಬುಡಕಟ್ಟು ಜನಾಂಗದ ಮೇಲೆ ಮಿತಿಮೀರಿದ ದಬ್ಬಾಳಿಕೆ, ದೌರ್ಜನ್ಯದ ವಿರುದ್ಧ ಸಿಡಿದೆದ್ದು, ಬ್ರಿಟಿಷರಿಗೆ ಕ್ರಾಂತಿಯ ಕಿಡಿ ಹೇಗಿರುತ್ತೆ ಎಂಬುದನ್ನು ಈ ನಾಯಕ ತೋರಿಸಿಕೊಟ್ಟಿದ್ದಾರೆ. ಇಂತಹ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರನ ಫೋಟೋ ಕೂಡಾ ಇಂದಿಗೂ ಪಾರ್ಲಿಮೆಂಟ್‌ನಲ್ಲಿದೆ. ಇಂತಹ ಆದರ್ಶ ವ್ಯಕ್ತಿಗಳ ಬದುಕನ್ನು ನಮ್ಮ ವೈಯಕ್ತಿಕ ಜೀವನದಲ್ಲಿ ರೂಢಿಸಿಕೊಳ್ಳೋಣ” ಎಂದು ಕರೆ ನೀಡಿದರು.

ಇತಿಹಾಸ ಪ್ರಾಧ್ಯಾಪಕರಾದ ರಾಜು ಮಾತನಾಡಿ, “ಪ್ರಪಂಚದ ಅನೇಕ ದೇಶಗಳಲ್ಲಿ ಭಾರತವೂ ಸೇರಿದಂತೆ ತಳಸಮುದಾಯದ ಜನಾಂಗದವರು ಅಂದರೆ ಬುಡುಕಟ್ಟು, ಅಲೆಮಾರಿ ಹಾಗೂ ಆದಿವಾಸಿಗಳು ಮೊದಲಿಂದಲೂ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದಂತಹ ಸಮುದಾಯಗಳಾಗಿವೆ. ಈ ಜನಾಂಗದವರು ಅಂದಿನಿಂದಲೂ ಕೂಡಾ ತಮ್ಮ ಅಸ್ತಿತ್ವಕ್ಕಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಶೋಷಣೆ, ದೌರ್ಜನ್ಯಗಳನ್ನು ಅಂತ್ಯಗೊಳಿಸಲು ಭಾರತದಲ್ಲಿಯೂ ಕೂಡಾ ಬುಡಕಟ್ಟು ಜನಾಂಗದ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರು ಹೋರಾಟಕ್ಕೆ ಇಳಿಯುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್‌ಗೆ ಆಹ್ವಾನ

ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಎರಡರ ಸಂಯೋಜನಾಧಿಕಾರಿ ಮಮತಾ ಹೆಗಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಸಾಗರ್ ಯೂತ್ ಫೋರ್ಸ್ ಅಸೋಸಿಯೇಷನ್ ಮುಖ್ಯಸ್ಥರಾದ ಪುಷ್ಪಲತಾ, ಭಾರತಿ ಸೇರಿದಂತೆ ಇತರರು ಇದ್ದರು.

ವರದಿ : ಅಮಿತ್ ಆರ್, ಆನಂದಪುರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...