ಶಿವಮೊಗ್ಗ | ಫುಟ್ ಪಾತ್ ಗೆ ನುಗ್ಗಿದ ಬೈಕ್ : ಇಬ್ಬರು ದುರ್ಮರಣ

Date:

ಶಿವಮೊಗ್ಗದ ಸಾಗರ ರಸ್ತೆಯ ಮಲ್ನಾಡು ಗೇಟ್ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಇಂದು ನಸುಕಿನಲ್ಲಿ ಸಂಭವಿಸಿದೆ.

ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊತೆ ಇಲ್ಲೇ ವಾಸವಾಗಿದ್ದರು.

ಆಯನೂರು ಗೇಟ್ ಕಡೆಯಿಂದ ಕೆಎ 14 ಈ ವೈ 1306 ಕ್ರಮ ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಫುಟ್ಪಾತ್ ನಲ್ಲಿದ್ದ ಟೆಂಟ್ ಗೆ ಡಿಕ್ಕಿ ಹೊಡೆದಿದ್ದಾರೆ .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೆಂಟ್ ನಲ್ಲಿ ದುರ್ಗಾ ಪ್ರಸಾದ್ ಅವರ ತಂದೆ ನಾಗಯ್ಯ, ತಾಯಿ ಕಾಮೇಶ್ವರಿ ಹಾಗೂ ತಂಗಿ ಜ್ಯೋತಿ ಎ ಇದ್ದರು. ಕಾಮೇಶ್ವರಿ ಸ್ಥಳದಲ್ಲೇ ಸಾವಿಗೀಡಾದರು.

ದುರ್ಗಾ ಪ್ರಸಾದ ಮೂತ್ರ ವಿಸರ್ಜನೆಗೆಂದು ಬೆಳಗಿನ ಜಾವ ಐದು ಇಪ್ಪತ್ತಕ್ಕೆ ಟೆಂಟ್ ನಿಂದ ಹೊರ ಬಂದಾಗ ಈ ಘಟನೆ ನಡೆದಿದ್ದು ಅವರು ಪಾರಾಗಿದ್ದಾರೆ.

ಬೈಕ್ ಅನ್ನು ಸುದರ್ಶನ್ ಎನ್ನುವರು ಚಲಾಯಿಸುತ್ತಿದ್ದು ಆತನ ಹಿಂದೆ ಆಕಾಶ ಎಂಬವನು ಕುಳಿತಿದ್ದನು ಆಕಾಶನಿಗೆ ತೀವ್ರವಾಗಿ ಗಾಯಗಳಾಗಿದ್ದು, ಆತನನ್ನು ಮೆಗನ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಸಾಗಿಸುವಾಗ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ತಲೆಗೆ ಹೊಡೆತ ಬಿದ್ದಿದ್ದ ಕಾಮೇಶ್ವರಿ ರವರು ಸಾವನ್ನಪ್ಪಿರುವುದಾಗಿ ಮೂಲಗಳು ದೃಢಪಡಿಸಿವೆ. ಪ್ರಕರಣ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...