ಶಿವಮೊಗ್ಗ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಪ್ರದೀಪ್ ಈಶ್ವರ್

Date:

ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ ಎಂದು ಶಾಸಕ ಪ್ರದೀಪ್ ಈಶ್ವರ್ ಕೋರಿದರು.

ಶಿವಮೊಗ್ಗದ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ನಡೆದ ರೋಡ್ ಷೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

“ಕರ್ನಾಟಕದ ಚರಿತ್ರೆಯ ಮೊದಲ ಪುಟ ಶಿವಮೊಗ್ಗ ಜಿಲ್ಲೆಯಿಂದ ಆರಂಭವಾಗುತ್ತದೆ. ಇಲ್ಲಿ ಜನಸಾಮಾನ್ಯರಿಗೆ ಸೇವೆ ಒದಗಿಸಲು ಗೀತಕ್ಕ ಉತ್ತಮ ನಾಯಕಿ. ಆದ್ದರಿಂದ ಈ ಬಾರಿ ಗೀತಕ್ಕಗೆ ಮತ ನೀಡಿ ಆಶೀರ್ವದಿಸಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಮಾತನಾಡಿ, “ಸಮಾಜದಲ್ಲಿ ಬಡತನ, ಹಸಿವು, ಅಸಮಾನತೆಯ ಪಿಡುಗು ನಿವಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ದುಡಿಯುತ್ತಿದೆ. ಅದೇ ಉದ್ದೇಶಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ” ಎಂದರು.

“ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ಕರೆತರುವುದು. ಅದು ಖಂಡಿತ ನೆರವೇರಲಿದೆ. ಅದೇ ರೀತಿ, ಗ್ಯಾರಂಟಿಗಳು ಬಡವರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ತಲುಪುತ್ತಿವೆ. ಇದಕ್ಕೆ ನ್ಯಾಯ ಒದಗಿಸಲು ಎಲ್ಲರೂ ಕೈ ಜೋಡಿಸಬೇಕು. ಆದ್ದರಿಂದ, ಈ ಬಾರಿ ಮತ ನೀಡಿ ಆಶೀರ್ವದಿಸಿ” ಎಂದು ಕೋರಿದರು.

ನಟ ದುನಿಯಾ ವಿಜಯ್ ಮಾತನಾಡಿ, “ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಅವರು ನೀಡಿದ ಕೊಡುಗೆ ಜನ ಮಾನಸದಲ್ಲಿ ಉಳಿದಿವೆ. ಅದೇ ರೀತಿ, ಗೀತಕ್ಕ ಕೂಡ ಜನಪರ ಆಡಳಿತ ನಡೆಸಿ, ಎಲ್ಲರೂ ಮೆಚ್ಚುವಂತಹ ನಾಯಕಿಯಾಗಿ ಹೊರಹೊಮ್ಮಲಿದ್ದಾರೆ. ಆದ್ದರಿಂದ, ಈ ಭಾರಿ ಒಂದು ಅವಕಾಶ ಕಲ್ಪಿಸಿಕೊಡಿ” ಎಂದರು.

ತರೀಕೆರೆ ಶಾಸಕ ಶ್ರೀನಿವಾಸ್ ಮಾತನಾಡಿ, “ಜಿಲ್ಲೆಯ ಅಭಿವೃದ್ಧಿಗೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಿ” ಎಂದು ಕೋರಿದರು.‌

ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಮಾತನಾಡಿ, “ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಮತದಾನ ಪ್ರಕ್ರಿಯೆ ಇದೇ ಮೇ 7ರಂದು ನಡೆಯಲಿದೆ. ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ನಿಮ್ಮ ಮನೆ ಮಗಳಾದ, ಗೀತಾ ಶಿವರಾಜ್‌ಕುಮಾರ್ ಸ್ಪರ್ಧಿಸಿದ್ದೇನೆ. ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ಜಾತಿ-ಧರ್ಮದವರ ಜೀವನ ಕ್ರಮವನ್ನು ಸುಧಾರಿಸಲು ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದ್ದರಿಂದ, ಸರ್ಕಾರದ ಈ ಋಣ ತೀರಿಸುವ ಹೊಣೆ ಎಲ್ಲರದ್ದಾಗಿದೆ. ಆದ್ದರಿಂದ, ವಿಪಕ್ಷಗಳು ಒಡ್ಡುವ ಹಣ-ಹೆಂಡದಂತಹ ಆಮಿಷಗಳಿಗೆ ಒಳಗಾಗದೆ, ಪೊಳ್ಳು ಭರವಸೆಗಳಿಗೆ ಮರುಳಾಗದೆ, ಕ್ಷೇತ್ರ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದರೆ, ನನಗೆ ಮತ ನೀಡಿ ಆಶೀರ್ವದಿಸಿ” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಿಜೆಪಿ ಸುಳ್ಳುಗಳು ಇನ್ನು ನಡೆಯುವುದಿಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ನಟ ಶಿವರಾಜ್‌ಕುಮಾರ್, ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್‌ ಪ್ರಸನ್ನಕುಮಾರ್, ಸೂಡ ಅಧ್ಯಕ್ಷ ಎಚ್ ಎಸ್ ಸುಂದರೇಶ್, ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವಿಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಎನ್ ರಮೇಶ್, ಮರಿಯಪ್ಪ, ಎಚ್ ಸಿ ಯೋಗೀಶ್, ರೇಖಾ ರಂಗನಾಥ, ಎಚ್ ಪಿ ಗಿರೀಶ್, ಶರತ್ ಮರಿಯಪ್ಪ ಸೇರಿದಂತೆ ಬಹುತೇಕ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...