ಶಿವಮೊಗ್ಗ | ಪಾನಮತ್ತರಾಗಿದ್ದ ಸ್ನೇಹಿತರ ನಡುವೆ ಗಲಾಟೆ; ಮಾರಕಾಸ್ತ್ರದಿಂದ ಹಲ್ಲೆ

Date:

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮದ್ಯದಂಗಡಿ(ಬಾರ್‌) ಬಳಿ 6 ಮಂದಿ ಸ್ನೇಹಿತರು ಜೊತೆಗೂಡಿ ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು, ಮಾರಕಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

6 ಮಂದಿ ಸ್ನೇಹಿತರ ನಡುವೆ ಜಗಳವಾಗಿದ್ದು, ಕಿರಣ್ ಎಂಬಾತ ತನ್ನ ಇನ್ನೊಬ್ಬ ಸ್ನೇಹಿತನಾದ ಸದಾನಂದ ಎರಂಬುವವನನ್ನು ಗಾಡಿಕೊಪ್ಪ ಬಾರ್ ಒಂದರ ಪಕ್ಕ ಬರಲು ತಿಳಿಸಿದ್ದಾನೆ. ಸದಾನಂದರವರು ಬಂದ ನಂತರ ಪುನಃ ಜಗಳ ಪ್ರಾರಂಭವಾಗಿ ಆರು ಜನರ ಪೈಕಿ ಮೂವರು ಚಾಕುವಿನಿಂದ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾದ ಸದಾನಂದ ಎಂಬಾತ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಆದಿವಾಸಿಗಳ ಕುರಿತು ವರದಿಗೆ ಬಂದ ಪತ್ರಕರ್ತನನ್ನು ವಶಕ್ಕೆ ಪಡೆದ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಶಿವಮೊಗ್ಗದ ಜಿಲ್ಲಾ ಮೆಗ್ಗಾನ್‌ ಅಸ್ಪತ್ರೆಗೆ ದಾಖಲಿಸಿದ್ದು, ಕಿರಣ್‌ ಎಂಬುವವರು ಜ.13ರ ಮಧ್ಯ ರಾತ್ರಿ 1:30ರ ವೇಳೆಯಲ್ಲಿ ಶಿವಮೊಗ್ಗ ನಗರದ ವಿನೋಬನಗರದ ಪೊಲೀಸ್‌ ಠಾಣೆಗೆ ಅಗಮಿಸಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆ ಕುರಿತು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಆನಂದ್‌, ನಿತಿನ್‌, ಮೋಹನ್‌, ಮಾಲತೇಶ್‌ ಮತ್ತು ರಾಕೇಶ್‌ ಅಡ್ಡು ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...