ಶಿವಮೊಗ್ಗ | ಬಿಸಿ ಚಹಾ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ನಿಧನ

Date:

ಮೈಮೇಲೆ ಬಿಸಿ ಚಹಾ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ನಗರ ಸಮೀಪದ ಹಿರಿಮನೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿದ್ದ ಮಗು ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದೆ. ಮೃತಪಟ್ಟ ಮಗುವನ್ನು 2 ವರ್ಷದ ಬಾಲಕ ಅಥರ್ವ ಎಂದು ಗುರುತಿಸಲಾಗಿದೆ.

ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ್ ಹಿರಿಮನೆ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಅಶ್ವಿನಿ ಪಾಟೀಲ್ ಅವರ 2 ವರ್ಷದ ಪುತ್ರ ಅಥರ್ವ ಅ. 24ರಂದು ಆಟವಾಡುತ್ತಿದ್ದ ವೇಳೆ ಮೈಮೇಲೆ ಬಿಸಿ ಟೀ ಬೀಳಿಸಿಕೊಂಡು ಗಂಭೀರವಾಗಿ ಗಾಯಗೊಂಡಿದ್ದ. ಮಗುವಿಗೆ ಮೊದಲು ಸ್ಥಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ, ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎಂಟು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಗು ಮೃತಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಾಹಿತ್ಯ ಸಮ್ಮೇಳನ | ಈ ಬಾರಿ ಅಲ್ಪಸಂಖ್ಯಾತ ಸಾಹಿತಿ ಅಧ್ಯಕ್ಷರಾಗಲಿ

ರಾಜೇಶ್ ಅವರ ನೆರೆಮನೆಯ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಂದು ರಾತ್ರಿ ಅಂತಿಮ ದರ್ಶನಕ್ಕೆ ಬಂದಿದ್ದ ಜನರಿಗೆಂದು ರಾಜೇಶ್ ಮತ್ತವರ ಪತ್ನಿ ದೊಡ್ಡ ಪಾತ್ರೆಯಲ್ಲಿ ಟೀ ಮಾಡಿ ತಮ್ಮ ಮನೆಯ ಜಗಲಿ ಮೇಲಿಟ್ಟಿದ್ದರು. ಆಟವಾಡುತ್ತಾ ಅಲ್ಲಿಗೆ ಬಂದಿದ್ದ ಬಾಲಕ ಅಥರ್ವ, ಪಾತ್ರೆಯನ್ನು ಎಳೆದಿದ್ದಾನೆ. ತುಂಬಾ ಬಿಸಿ ಇದ್ದ ಟೀ ಮೈಮೇಲೆ ಚೆಲ್ಲಿ ಗಾಯಗೊಂಡಿದ್ದ.

ರಾಜೇಶ್, ಅಶ್ವಿನಿ ದಂಪತಿಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿದ್ದು ಇದೀಗ ಪುತ್ರನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಿರಿಮನೆ ಗ್ರಾಮದಲ್ಲಿ ಮೌನ ಆವರಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...