ಶಿವಮೊಗ್ಗ | ವಾಟ್ಸಾಪ್‌ ಗ್ರೂಪ್‌ನಲ್ಲಿ ಸಿಎಂ ನಿಂದನೆ; ಬುದ್ದಿ ಹೇಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

Date:

ಮಲ್ಲೇಶ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿರೇಶ್ ಎಂಬ ಯುವಕನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಮಂಗೋಟೆ ಗ್ರಾಮದಲ್ಲಿ ನಡೆದಿದೆ.

ಮಂಗೋಟೆ ಯುವಕರ ಬಳಗ ವಾಟ್ಸಾಪ್ ಗ್ರೂಪ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೇಶ್ ಎಂಬ ಯುವಕ ತುಂಬಾ ಅವಾಚ್ಯ ಮತ್ತು ಅಸಭ್ಯ ಶಬ್ದಗಳಿಂದ ನಿಂದಿಸಿದ್ದನು. ಈ ಹಿನ್ನೆಲೆಯಲ್ಲಿ, ʼರಾಜ್ಯದ ಮುಖ್ಯಮಂತ್ರಿ ಬಗ್ಗೆ ಈ ರೀತಿ ವಾಟ್ಸಾಪ್ ಗ್ರೂಪ್‌ನಲ್ಲಿ ಮಾತನಾಡುವುದು ಅಸಭ್ಯ ಮತ್ತು ಅವಾಚ್ಯ ಶಬ್ದ ನಿಂದನೆ ಮಾಡುವುದು ತಪ್ಪುʼ ಎಂದು ತಿಳಿ ಹೇಳಿದ್ದಕ್ಕೆ ರಾತ್ರಿ ಸುಮಾರು 9-46ರಲ್ಲಿ ಮಲ್ಲೇಶ್ ಅವರ ಮನೆಗೆ ನುಗ್ಗಿದ ವಿರೇಶ್ ಮದ್ಯಪಾನ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ.

ಹಲ್ಲೆಗೊಳಗಾದ ಮಲ್ಲೇಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಂಗೋಟೆ ಯುವಕರ ಬಳಗ ವಾಟ್ಸಾಪ್ ಗ್ರೂಪ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿದ್ದರಿಂದ, ಅವರು ರಾಜ್ಯದ ಮುಖ್ಯಮಂತ್ರಿ ಹಾಗೆಲ್ಲ ಅವಾಚ್ಯ ಶಬ್ದಗಳಿಂದ ವಾಟ್ಸಾಪ್‌ ಗುಂಪಿನಲ್ಲಿ ಅವಾಚ್ಯ ಶಬ್ದ ಬಳಸುವುದು ತಪ್ಪು ಎಂದಿದ್ದಕ್ಕೆ, ಪಾನ ಮತ್ತನಾಗಿ ನಮ್ಮ ಮನೆಗೆ ಬಂದ ಆತ ಬಾಗಿಲು ತೆರೆಯುತ್ತಿದಂತೆ ನನ್ನ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಮುಖ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ತುಂಬಾ ಪೆಟ್ಟಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತದನಂತರ ಊರಿನವರು ಮತ್ತು ಪಂಚಾಯತ್ ಅವರು ಎಲ್ಲರೂ ಬುದ್ದಿಮಾತು ಹೇಳಿ ರಾಜಿ ಮಾಡಿಸಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನಿಷ್ಪಕ್ಷಪಾತ ಮತ ಎಣಿಕೆಗೆ ʼಎದ್ದೇಳು ಕರ್ನಾಟಕʼ ಆಗ್ರಹ

“ಸಮಾಜದಲ್ಲಿ ಇಂತಹ ನಡೆವಳಿಕೆ ಸಮಂಜಸವಲ್ಲ, ಇಂತಹ ಪುಂಡರಿಗೆ ಸರಿಯಾಗಿ ಬುದ್ದಿ ಹೇಳೋ ಕೆಲಸ ಮತ್ತು ಕ್ರಮವಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಪಕ್ಷ ಅಥವಾ ವ್ಯಕ್ತಿ ಅಭಿಮಾನ, ವ್ಯಕ್ತಿಯಿಂದ ವ್ಯಕ್ತಿಗೆ ಬದಲಾವಣೆ ಇರುವುದು ಸಹಜ. ಅದನ್ನು ವಯಕ್ತಿಕ ದ್ವೇಷವಾಗಿ ಬೆಳಸಬಾರದು. ಸಮಾಜದಲ್ಲಿ ಶಾಂತಿ ಕಾಪಾಡಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...