ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

Date:

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಟಿ ಯೋಜನೆಗಳ ಜಿಲ್ಲಾಮಟ್ಟದ ಫಲಾನುಭವಿಗಳ ಸಮಾವೇಶ ಫೆ.24ರಂದು ನಗರದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್) ಆವರಣದಲ್ಲಿ ಆಯೋಜಿಸಲಾಗಿದ್ದು, ಅರ್ಹ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಹಾಜರಿರುವಂತೆ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ಸುಮಾರು 50ಸಾವಿರ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದು, ಫಲಾನುಭವಿಗಳ ಅನುಕೂಲಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗಿದೆ. ಹಾಗಾಗಿ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶ್ರೀಕಾಂತ್ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿ, ಮತ ನೋಡದೇ ಎಲ್ಲ ವರ್ಗದ ಜನರಿಗೂ ಯೋಜನೆ ತಲುಪಿಸಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ 4.58ಲಕ್ಷ ಫಲಾನುಭವಿಗಳು, ಗೃಹ ಲಕ್ಷಿ ಯೋಜನೆಗೆ 3.55ಲಕ್ಷ ಫಲಾನುಭವಿಗಳು, ಅನ್ನಭಾಗ್ಯದಿಂದ3.80 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಿದೆ. ಶಕ್ತಿ ಯೋಜನೆಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ 1.60ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಶಿವಮೊಗ್ಗದಲ್ಲಿ ನಡೆಯುತ್ತಿರುವ ಗ್ಯಾರಂಟಿ ಸಮಾವೇಶವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಚಿವರುಗಳು, ಶಾಸಕರು, ಪ್ರಮುಖರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...