ಶಿವಮೊಗ್ಗ | ಖಬರಸ್ಥಾನಕ್ಕಾಗಿ ಜಾಗ ನೀಡುವಂತೆ ಮುಸ್ಲಿಂ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

Date:

ಖಬರಸ್ಥಾನಕ್ಕಾಗಿ ಜಮೀನು ನೀಡಬೇಕು ಎಂದು ಆಗ್ರಹಿಸಿ ಚೋರಡಿಯ ಜಾಮೀಯಾ ಮಸ್ಟಿದ್ ಕಮಿಟಿಯ ಮುಖಂಡರು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.

ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳಿವೆ. ಆದರೆ ಮುಸ್ಲಿಮರು ಮರಣ ಹೊಂದಿರೆ ಅವರ ಅಂತ್ಯ ಸಂಸ್ಕಾರ ಮಾಡಲು ಜಾಗವೇ ಇಲ್ಲವಾಗಿದೆ. ಇದುವರೆಗೂ ಕುಮದ್ವತಿ ನದಿಯ ದಡದಲ್ಲಿಯೇ ದಫನ ಮಾಡಿಕೊಂಡು ಬರುತ್ತಿದ್ದರು. ಆದರೆ ಇದಕ್ಕೆ ಯಾವುದೇ ದಾಖಲಾತಿ ಇಲ್ಲ ಮತ್ತು ಅತಿವೃಷ್ಟಿಯಯಿಂದಾಗಿ ಗೋರಿ ಸಮೇತ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

1002031840

ಈ ಬಗ್ಗೆ ಕಳೆದ 25 ವರ್ಷಗಳಿಂದಲೂ ಬೇಡಿಕೆ ಇಡುತ್ತಾ ಬಂದಿದ್ದೆವು.‌ಆದರೂ ಕೂಡ ಸರ್ಕಾರವಾಗಲೀ, ಅಧಿಕಾರಿಗಳಾಗಲೀ ಸ್ಮಶಾನಕ್ಕೆ ಜಾಗ ನೀಡಿಲ್ಲ. ಆದ್ದರಿಂದ ಈಗಲಾದರೂ ಖಬರಸ್ಥಾನಕ್ಕೆ ಜಾಗ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸಲ್ಲಿಸಿದ ಸಂದರ್ಭದಲ್ಲಿ ಚೋರಡಿ ಜಾಮೀಯಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್, ಪ್ರಮುಖರಾದ ಅನ್ವರ್, ಅಥಾವುಲ್ಲಾ, ಸನಾವುಲ್ಲಾ, ಬಾಷಾ, ನಯಾಬ್. ಕಲೀಮುಲ್ಲಾ, ರಿಜ್ವಾನ್, ನಜೀರ್ ಅಹಮ್ಮದ್, ಮೊಹಮ್ಮದ್, ಮುದಾಸಿರ್, ಸಮೀವುಲ್ಲಾ, ಖಾಸೀಂ ಸೇರಿದಂತೆ ಇನ್ನಿತರರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...