ಶಿವಮೊಗ್ಗ | ಮಹಾನಗರ ಪಾಲಿಕೆ ಹಾಗೂ ಖಾಸಗಿ ನಿವೇಶನಗಳ ಅತಿಕ್ರಮಣ ತೆರವಿಗೆ ಆಗ್ರಹ

Date:

ಗೋಪಾಲಗೌಡ ಬಡಾವಣೆ ಮಹಾನಗರ ಪಾಲಿಕೆಯ ಹಾಗೂ ಖಾಸಗಿ ನಿವೇಶನಗಳ ಅತಿಕ್ರಮಣ ತೆರವುಗೊಳಿಸುವಂತೆ ಒತ್ತಾಯಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಮಹಾನಗರ ಪಾಲಿಕೆ ವ್ಯಾಪ್ತಿಯ 17ನೇ ವಾರ್ಡ್‌ ಗೋಪಾಲಗೌಡ ಬಡಾವಣೆಯ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಬಭಾಗ ಮಹಾನಗರ ಪಾಲಿಕೆಗೆ ಸೇರಿದ ಸಾಕಷ್ಟು ಖಾಲಿ ನಿವೇಶನಗಳಿವೆ. ಇದಕ್ಕೆ ಹೊಂದಿಕೊಂಡಂತೆ ಈ ಹಿಂದೆ ಪಾಲಿಕೆ ಕಸ ವಿಲೇವಾರಿ ಘಟಕ ತೆರೆದಿದ್ದು, ಉಳಿದ ನಿವೇಶನದ ಜಾಗಕ್ಕೆ ಯಾವುದೇ ತಡೆಗೋಡೆ ನಿರ್ಮಿಸಿಲ್ಲ. ಇದನ್ನು ಗಮನಿಸಿದ ಮಾಜಿ ಜನಪ್ರತಿನಿಧಿ ಹಾಗೂ ಪ್ರಭಾವಿ ಮುಖಂಡರು ಹಾಲಿ ಜನಪ್ರತಿನಿಧಿಗಳ ಕುಮ್ಮಕ್ಕಿನಿಂದ ಮಹಾನಗರ ಪಾಲಿಕೆಯ ಆಸ್ತಿ ಕಬಳಿಸಲು ಹೊಂಚು ಹಾಕಿದ್ದಾರೆ” ಎಂದು ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಆರೋಪಿಸಿದರು.

“ಪಾಲಿಕೆಗೆ ಸೇರಿದ ಹಾಗೂ ಕೆಲವು ಖಾಸಗಿ ವ್ಯಕ್ತಿಗಳ ಖಾತೆ ಇರುವ ನಿವೇಶನಗಳಿಗೆ ಅಕ್ರಮವಾಗಿ ಬೇಲಿ ನಿರ್ಮಿಸಿಕೊಳ್ಳಲು ಯತ್ನಿಸಿದ್ದಾರೆ. ಇದನ್ನು ಗಮನಿಸಿ ಸಾರ್ವಜನಿಕರು ಹಾಗೂ ಖಾಸಗಿ ನಿವೇಶನದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿ ಮೇರೆಗೆ ರಕ್ಷಣಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಖಾಸಗಿ ನಿವೇಶನಗಳಿಗೆ ಅಕ್ರಮವಾಗಿ ನಿರ್ಮಿಸಿದ್ದ ಬೇಲಿಗಳನ್ನು ತೆರವುಗೊಳಿಸಿದ್ದರು. ಉಳಿದ ಮಹಾನಗರ ಪಾಲಿಕೆಗೆ ಸೇರಿದ ಜಾಗದ ಒತ್ತುವರಿಯನ್ನು ಇನ್ನೂ ತೆರವುಗೊಳಿಸಿಲ್ಲ. ಆದ್ದರಿಂದ ತಾವುಗಳು ಖುದ್ದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾನಗರ ಪಾಲಿಕೆಯ ಅಸ್ತಿಗೆ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಿರುವ ಭೂ ಕಬಳಿಕೆದಾರರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.  ಖಾಲಿ ಜಾಗದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಪಾರ್ಕ್/ಉದ್ಯಾನವನ ಅಥವಾ ಕ್ರೀಡಾಂಗಣ ನಿರ್ಮಿಸಿ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗುವಂತೆ ಬಹುದಿನದ ಬೇಡಿಕೆಗೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಾದಕ ವಸ್ತುಗಳ ದುರುಪಯೋಗ, ಕಳ್ಳ ಸಾಗಣಿಕೆ ವಿರುದ್ಧ ಜಾಗೃತಿ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಈ ಸಂದರ್ಭದಲ್ಲಿ ಜಿ ಡಿ ಮಂಜುನಾಥ್, ಟಿ ಡಿ ಗಿತೇಂದ್ರ ಗೌಡ, ಆರ್ ರಾಜಶೇಕರ್, ಬಿ ಆರ್ ರವಿ, ಬಿ ರುದ್ರಪ್ಪ, ಈ ಟಿ ಕಿರಣ್ ಕುಮಾರ್, ನಾಗೇಶ್, ಕೆ ಪಿ ಸುಬ್ಬಣ್ಣ, ಎಂ ಬಿ ರವಿಕುಮಾ‌ರ್, ಪ್ರಜ್ವಲ್, ಸತೀಶ್ ಚಂದ್ರ, ಅಜಯ್, ಜಿ ಎಸ್ ಶಿವಕುಮಾರ್, ಹೆಚ್ ಬಸವರಾಜ್, ಎನ್ ಆರ್ ಮುರುಳಿ, ಸುಧಾಕ‌ರ್ ಶೆಟ್ಟಿ, ಅರವಿಂದ್, ಎ ಪಿ ಜಯಣ್ಣ, ಶಿವಾನಂದ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...