ಶಿವಮೊಗ್ಗ | ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ಗೆ ಆಗ್ರಹ

Date:

ಶಿವಮೊಗ್ಗ ನಗರದಲ್ಲಿ ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ ಮಾಡುವಂತೆ ಆಗ್ರಹಿಸಿ ಗೋನ್ ಸೋಷಿಯಲ್ ಸರ್ವೀಸ್ ಅಸೋಸಿಯೇಷನ್ ಸಂರಕ್ಷಕ ಎನ್‌ ಎಂ ಸಿಗ್ಬತ್‌ಉಲ್ಲಾ ನೇತೃತ್ವದಲ್ಲಿ ಸಭಾಪತಿ ಯು ಟಿ ಖಾದರ್‌ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ಕಾರ್ಯಕರ್ತರು, “ಶಿವಮೊಗ್ಗ ನಗರವು ಉನ್ನತ ಶಿಕ್ಷಣಕ್ಕೆ ಬೇಕಾದ ಎಲ್ಲ ರೀತಿಯ ಸೌಲಭ್ಯ ಹಾಗೂ ಅನುಕೂಲತೆಗಳನ್ನು ಹೊಂದಿದ್ದು, ಎರಡು ವೈದ್ಯಕೀಯ ಕಾಲೇಜುಗಳಿವೆ. ಇದರಲ್ಲಿ ಖಾಸಗಿ ಹಾಗೂ ಸರ್ಕಾರಿ ಕಾಲೇಜು ಸ್ವಾಮ್ಯದಲ್ಲಿವೆ. ಪ್ಯಾರಾ ಮೆಡಿಕಲ್ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜುಗಳು, ಬಿಎಎಂಎಸ್ ಕಾಲೇಜು ಸೇರಿದಂತೆ ಪದವಿ ಕಾಲೇಜುಗಳೂ ಇವೆ” ಎಂದು ಹೇಳಿದರು.

“ಸದರಿ ಕಾಲೇಜುಗಳ ದಾಖಲಾತಿಗೆ ಅಕ್ಕ-ಪಕ್ಕದ ಜಿಲ್ಲೆಗಳಿಂದ ಅನೇಕ ಮಕ್ಕಳು ವ್ಯಾಸಾಂಗಕ್ಕಾಗಿ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಹಾಗೆಯೇ ಉನ್ನತ ಶಿಕ್ಷಣಕ್ಕಾಗಿ ಬಯಸಿ ಶಿವಮೊಗ್ಗ ಜಿಲ್ಲೆಗೆ ಬರುವ ಸಂಖ್ಯೆ ಅಧಿಕವಾಗಿದೆ. ಅಲ್ಲದೆ ಕಾನೂನು ಶಿಕ್ಷಣಕ್ಕಾಗಿ ಅನ್ಯ ಜಿಲ್ಲೆಗಳಿಗೆ ಇಲ್ಲಿನ ಮಕ್ಕಳು ವಲಸೆ ಹೋಗುತ್ತಿರುವುದು ಕಂಡುಬಂದಿದೆ. ಜತೆಗೆ ಕಾನೂನು ಪದವಿ ಪಡೆಯಲು ಬಡ ವಿದ್ಯಾವಂತ ಮಕ್ಕಳಿಗೆ ಆಸಕ್ತಿಯಿದ್ದರೂ ಕೂಡಾ ಖಾಸಗಿ ಕಾನೂನು ಕಾಲೇಜಿಗೆ ದಾಖಲಾತಿ ಹೊಂದಲಾಗದೆ ಅನಿವಾರ್ಯವಾಗಿ ಅನ್ಯ ವಿಷಯಗಳನ್ನು ಪಡೆದು ವ್ಯಾಸಾಂಗದಲ್ಲಿ ಮುಂದುವರೆಯುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಬಲವರ್ಧನೆಗೆ ಸದಸ್ಯರ ಸಹಕಾರ ಅಗತ್ಯ: ಡಿ ಜಿ ನಾಗರಾಜ್

“ಶಿವಮೊಗ್ಗ ಜಿಲ್ಲೆ ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳ ಬಡ ಪ್ರತಿಭಾನ್ವಿತ ಮಕ್ಕಳಿಗೆ ಅನುಕೂಲವಾಗುವಂತೆ ಹಾಗೂ ಅವರು ಕಂಡ ಕನಸು ನನಸುಗೊಳಿಸಿಕೊಳ್ಳಲು ನಗರದಲ್ಲಿ ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ಗೆ ಅನುಮತಿ ಹಾಗೂ ಅನುದಾನ ನೀಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷ ದೇವರಾಜ್, ಲೀಗಲ್ ಅಡ್ವಕೇಟ್ ಸುಹಾಸ್, ಲೋಕೇಶ್, ಪುರುಖಾನ್, ಜಿಶಾನ್, ಅಸ್ಲಾಂ, ಅಪ್ಪಿ, ನಾಸಿರ್
ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...