ಶಿವಮೊಗ್ಗ | ಅವಹೇಳನಕಾರಿ ಕಮೆಂಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್

Date:

  • ಅವಹೇಳನಕಾರಿಯಾಗಿ ಕಮೆಂಟ್ ಆರೋಪಿಸಿ ದೂರು ನೀಡಿದ್ದ ಕಾಂಗ್ರೆಸ್‌ನ ಸೌಗಂಧಿಕಾ ರಘುನಾಥ್
  • ಯುವ ಬ್ರಿಗೇಡ್ ಸಂಸ್ಥಾಪಕನ ವಿರುದ್ಧ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಆರೋಪದ ಮೇಲೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಆ. 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು.

ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಚಕ್ರವರ್ತಿ ಸೂಲಿಬೆಲೆ ಫೇಸ್​​ಬುಕ್​ನಲ್ಲಿ ಬರೆದುಕೊಂಡಿದ್ದರು. ಈ ಪೋಸ್ಟಿಗೆ ಕಮೆಂಟ್ ಮಾಡಿದ್ದ ಸೌಗಂಧಿಕಾ ರಘುನಾಥ್, ”ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
sulibele comment

ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಾಮೆಂಟ್ ಹಾಕಿದ್ದರು. ಈ ಕಾರಣಕ್ಕೆ ಫೇಸ್​​​​ಬುಕ್​​ನಲ್ಲಿ ಅವಾಚ್ಯವಾಗಿ ಕಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ರಘುನಾಥ್ ಆರೋಪಿಸಿದ್ದಾರೆ.

WhatsApp Image 2023 08 28 at 1.48.34 PM

‘ಕಮೆಂಟ್ ಹಾಕಿದ ಬಳಿಕ ಸಾಕಷ್ಟು ಫೇಕ್ ಅಕೌಂಟ್​​ಗಳಿಂದ ನನ್ನ ತೇಜೋವಧೆಗೆ ಪ್ರಯತ್ನಪಟ್ಟಿವೆ. ನಾನು ಯಾವುದಕ್ಕೂ ಸೊಪ್ಪು ಹಾಕೋದಿಲ್ಲ‌. ಸ್ವತಃ ಸೂಲಿಬೆಲೆ ಕಮೆಂಟ್ ಮಾಡಿ, ನಿನಗೆ ಏನು ಉರಿಯುತ್ತೆ’ ಎಂದು ಹಾಕಿದ್ದಾರೆ ಎಂದ ಸೌಗಂಧಿಕಾ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...