ಶಿವಮೊಗ್ಗ | ಮಧುಮೇಹ ಜಾಗೃತಿ; ಆಶಾ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಾಗಾರ

Date:

ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಜಿ ಕೆ ಮಿಥುನ್‌ ಕುಮಾರ್‌ ಅಭಿಪ್ರಾಯಪಟ್ಟರು.

ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ವಿನ್ ಲೈಫ್, ಡಯಬಿಟಿಸ್ ವೆಲ್‌ನೆಸ್ ಸೆಂಟರ್, ಮೆಟ್ರೋ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ನಡೆದ ಆಶಾ ಕಾರ್ಯಕರ್ತೆಯರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ತರಬೇತಿ ಕಾರ್ಯಗಾರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ ಎಸ್‌ ನಟರಾಜ್‌ ಮಾತನಾಡಿ, “ಆರೋಗ್ಯ ಸುಧಾರಣೆಯಲ್ಲಿ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾಗಿದೆ. ಅವರಿಗೆ ಇಂತಹ ತರಬೇತಿ ಅಗತ್ಯವಾಗಿ ಬೇಕಾಗಿತ್ತು. ಆ ನಿಟ್ಟಿನಲ್ಲಿ ವಿನ್ ಲೈಫ್, ಡಯಬಿಟಿಸ್ ವೆಲ್ ನೆಸ್ ಸೆಂಟರ್ ಹಾಗೂ ಮೆಟ್ರೋ ಆಸ್ಪತ್ರೆ ಮಧುಮೇಹ ಮತ್ತು ಸಿಪಿಆರ್‌ ಕುರಿತು ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರ ಶ್ಲಾಘನೀಯವಾದದ್ದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಾಗಾರದಲ್ಲಿ ಆಶಾ ಕಾರ್ಯಕರ್ತೆಯರು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದರು. ಈ ಕಾರ್ಯಾಗಾರದಲ್ಲಿ ಮಧುಮೇಹ @360°, ಸಮತೋಲನ ಆಹಾರ ಪದ್ಧತಿ, ಮೆಡಿಕಲ್ ಯೋಗ ಥೆರಪಿ, ತುರ್ತು ಜೀವ ರಕ್ಷಕ ತರಬೇತಿ ಹಾಗೂ ಆಧುನಿಕ ಆವಿಷ್ಕಾರಗಳ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಉಪನ್ಯಾಸವನ್ನು ಸವಿಸ್ತಾರವಾಗಿ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಬೆಟ್ಟಿಂಗ್ ದಂಧೆ ವಿರುದ್ಧ ಜನಪರ ಸಂಘಟನೆಗಳಿಂದ ಪೋಸ್ಟರ್ ಅಭಿಯಾನ

ಡಾ ಪೃಥ್ವಿ ಬಿ ಸಿಯವರಿಂದ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಡಯಬಿಟಿಸ್ ಕುರಿತು ಸಂಪೂರ್ಣ ಮತ್ತು ನಿರಂತರ ಮಾಹಿತಿಗಾಗಿ ಕ್ಯೂಆರ್ ಸ್ಕ್ಯಾನರ್ ಕೋಡ್ ಅನಾವರಣಗೊಳಿಸಲಾಯಿತು.

ವೇದಿಕೆಯಲ್ಲಿ ಆರ್‌ಸಿಹೆಚ್ ಅಧಿಕಾರಿ ಡಾ ಓ ಮಲ್ಲಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ನಾಗರಾಜ್ ನಾಯಕ್ ಎಲ್, ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ ಪಿ ಲಕ್ಷ್ಮೀ ನಾರಾಯಣ ಆಚಾರ್‌ ಹಾಗೂ ವಿನ್ ಲೈಫ್‌ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ  ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪೃಥ್ವಿ ಬಿ ಸಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...