ಶಿವಮೊಗ್ಗ | ಮದ್ಯ ಸೇವಿಸಿ ವಾಹನ ಚಾಲನೆ; ₹10,000 ದಂಡ ವಸೂಲಿ ಮಾಡಿದ ಸಂಚಾರಿ ಪಿಎಸ್‌ಐ

Date:

ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪಿಎಸ್‌ಐ ಗರಿಷ್ಠ ₹10,000 ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ.

ನ್ಯಾಯಾಲಯದ ಸಂಖ್ಯೆ ಸಿಸಿ 6730/24ರ ಪ್ರಕರಣದಲ್ಲಿ ಅಕ್ಟೋಬರ್‌ 23ರಂದು ₹10,000 ದಂಡ ವಸೂಲಾತಿ ಮಾಡಲಾಗಿದ್ದು, ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ತಮ್ಮ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರನಿಗೆ ಭದ್ರಾವತಿ ಸಂಚಾರ ಪೊಲೀಸ್ ಠಾಣೆ ಪಿಎಸ್‌ಐ ₹10,000 ದಂಡ ವಿಧಿಸಿರುತ್ತಾರೆ” ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದಲ್ಲಿ ಯಾವುದೇ ವ್ಯಕ್ತಿ ಮದ್ಯ ಸೇವಿಸಿ ವಾಹನ ಚಲಾವಣೆ ಮಾಡುತ್ತಿದ್ದರೆ ಸಂಚಾರಿ ಪೊಲೀಸರು ಆತನ ಮೇಲೆ ಸೆಕ್ಷನ್ 185ರಡಿ ದೂರು ದಾಖಲಿಸುತ್ತಾರೆ. ಬಿಎಸಿ ಪರೀಕ್ಷೆ ಮಾಡಿದ ನಂತರ ದಂಡ ವಿಧಿಸಬಹುದು. ವಾಹನವನ್ನೂ ಕೂಡಾ ಕಸ್ಟಡಿಗೆ ತೆಗೆದುಕೊಳ್ಳಬಹುದು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪೊಲೀಸ್ ಇಲಾಖೆ, ಸಾರ್ವಜನಿಕರ ಬೇಡಿಕೆ ಈಡೇರಿಸುವಂತೆ ಗೃಹ ಸಚಿವರಿಗೆ ಮನವಿ

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 207ರ ಅಡಿಯಲ್ಲಿ ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ವಾಹನದ ಎಲ್ಲ ದಾಖಲೆಗಳನ್ನೂ ಕೂಡಾ ಸಂಚಾರ ಪೊಲೀಸರು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ಏಳು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ₹2,000ದಿಂದ ₹10,000ದವರೆಗೆ ದಂಡ ವಿಧಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...