ಶಿವಮೊಗ್ಗ | ಮೆರವಣಿಗೆ ವೇಳೆ ಎಲ್‌ಇಡಿ ಪರದೆ ಬಿದ್ದು ಒಬ್ಬರಿಗೆ ಗಾಯ; ಆಸ್ಪತ್ರೆಗೆ ಸಚಿವರ ಭೇಟಿ

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬೃಹತ್‌ ಎಲ್‌ಇಡಿ ಪರದೆಗಳ ಮೂಲಕ ಮೆರವಣಿಗೆಯನ್ನು ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕ್ಯಾಂಟರ್‌ ಲಾರಿಗಳಲ್ಲಿ ಈ ಎಲ್‌ಇಡಿ ಪರದೆಗಳನ್ನು ಇರಿಸಲಾಗಿತ್ತು. ಗಾಂಧಿ ಬಜಾರ್‌ನಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಎಲ್‌ಇಡಿ ಪರದೆ ಕೆಳಗೆ ಬಿದ್ದಿದೆ. ಈ ವೇಳೆ ವಾಹನದ ಪಕ್ಕದಲ್ಲಿ ನಡೆದು ಸಾಗುತ್ತಿದ್ದ ಕೆಲವರು ಗಾಯಗೊಂಡಿದ್ದರು. ಗಾಯಳುಗಳನ್ನು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಬಳಿಕ ಸಚಿವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್, ಜಿ ಡಿ ಮಂಜುನಾಥ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...