ಶಿವಮೊಗ್ಗ | ಸರ್ಕಾರಿ ನೌಕರರ ಸಂಘದ ಚುನಾವಣೆ; ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟ

Date:

ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಕುತೂಹಲ ಕೆರಳಿದ್ದ ಶಿವಮೊಗ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಶನಿವಾರ ನಡೆದಿದ್ದು, ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟವಾಗಿದೆ.

ಶಿವಮೊಗ್ಗ ಜಿಲ್ಲಾ ಘಟಕದ 30 ಮಂದಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ವಿಶೇಷವಾಗಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಂದಾಯ ಇಲಾಖೆಯಲ್ಲಿ ಸತ್ಯನಾರಾಯಣ ಅವರು ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ತಹಶೀಲ್ದಾರ್‌ ಗಿರೀಶ್‌ ಅವರ ವಿರುದ್ದ ಒಂದು ಮತದಿಂದ ವಿಜಯಶಾಲಿಯಾಗಿ, ನೌಕರರ ಜಿಲ್ಲಾ ಘಟಕಕ್ಕೆ ಪ್ರವೇಶಿಸಲಿದ್ದಾರೆ.

ಗಿರೀಶ್ ಬಿ(ಕೃಷಿ ಇಲಾಖೆ), ದೀಪಕ್ ಪಿ ಎಸ್(ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ), ಕಿರಣ್ ಎಚ್ (ಜಿಲ್ಲಾ ಪಂಚಾಯತ್), ಪ್ರವೀಣ್ ಕುಮಾರ್ ಜಿ(ತಾಲೂಕು ಪಂಚಾಯಿತ್), ಮಧುಸೂದನ್(ಅಬಕಾರಿ ಇಲಾಖೆ), ಕೊಟ್ರೇಶ್(ಸಮಾಜ ಕಲ್ಯಾಣ ಇಲಾಖೆ), ಅನಿತಾ ವಿ(ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ), ರಂಗನಾಥ್(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ), ಸತ್ಯಭಾಮ ಎಸ್ ಜಿ(ಮೀನುಗಾರಿಕೆ ಇಲಾಖೆ), ರಾಜು ಲಿಂಬು ಚೌಹಣ್‌(ಅರಣ್ಯ ಇಲಾಖೆ), ಡಾ.ಗುಡದಪ್ಪ ಕಸಬಿ(ಆರೋಗ್ಯ ಇಲಾಖೆ), ಡಾ ಸಿ ಎ ಹಿರೇಮಠ್(ಆಯುಷ್ ಇಲಾಖೆ), ಮಹೇಶ ಪಿಎಲ್(ಇಎಸ್‌ ಐ), ರಮೇಶ್ ಎಸ್ ವೈ(ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ) ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಶ್ ಕೆಎಚ್(ಗ್ರಂಥಾಲಯ ಇಲಾಖೆ), ಲಿಂಗಪ್ಪ ಮತ್ತು ಧರ್ಮಪ್ಪ(ಪ್ರೌಢಶಾಲಾ ವಿಭಾಗ), ಶಶಿಧರ್ ಡಿ ಟಿ(ಪದವಿ ಪೂರ್ವ ಶಿಕ್ಷಣ), ಧನ್ಯ ಕುಮಾರ್(ಪ್ರಥಮ ದರ್ಜೆ ಕಾಲೇಜು), ಹನುಮಂತಪ್ಪ ಜಿ(ಮಹಿಳಾ ಪಾಲಿಟೆಕ್ನಿಕ್), ಅಣ್ಣಪ್ಪ ವಿ ಬಿ(ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ), ರವಿಕಿರಣ್ ವೈ(ಗಣಿ ಮತ್ತು ಭೂ ವಿಜ್ಞಾನ ಇಲಾಖೆ), ಚನ್ನಕೇಶವ ಮೂರ್ತಿ(ಭೂಮಾಪನ ಮತ್ತು ಕಂದಾಯ ಇಲಾಖೆ), ಸುಬ್ರಮಣ್ಯ ಜಾದವ್(ಶಾಲಾ ಶಿಕ್ಷಣ ಇಲಾಖೆ), ಜತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಸ್ಪತ್ರೆ ಮತ್ತು ಇತರ ಇಲಾಖೆಗಳು ಕ್ಷೇತ್ರದಿಂದ ವಿಜಯ್ ಅಂಟೊ ಸಗಾಯ್, ಅಶೋಕ ಟಿಜಿ ಮತ್ತು ನರಸಿಂಹ ಕೆ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅರಬೆತ್ತಲೆಗೊಳಿಸಿ ಮಹಿಳೆಗೆ ಹಲ್ಲೆ ಪ್ರಕರಣ; ಸಂತ್ರಸ್ತರ ಮನೆಗೆ ಶಾಸಕರು, ಪೋಲಿಸ್ ಆಯುಕ್ತರ ಭೇಟಿ

ರಾಜ್ಯ ಸರ್ಕಾರಿ‌ ನೌಕರರ ಸಂಘದ ಜಿಲ್ಲಾ‌ ಶಾಖೆಯ 68 ಮಂದಿ ನಿರ್ದೇಶಕರ ಸ್ಥಾನಗಳ ಪೈಕಿ ಈಗಾಗಲೇ‌ 38 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 30 ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆದಿದೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮತದಾನಕ್ಕೆ 11 ಬೂತ್‌ಗಳನ್ನು ನಿರ್ಮಿಸಲಾಗಿತ್ತು. 25 ಇಲಾಖೆಯಲ್ಲಿ 28 ಜನ ಆಯ್ಕೆ ಆಗಬೇಕಿದ್ದು, 70 ಜನ ಸ್ಪರ್ಧಾಳುಗಳು ಕಣದಲ್ಲಿದ್ದರು. ಬೆಳಿಗ್ಗೆ 9 ಗಂಟೆಯಿಂದ ಮತದಾನ ಶುರುವಾಗಿ, ಸಂಜೆ 4 ಗಂಟೆಗೆ ಮುಕ್ತಾಯಗೊಂಡಿತು. 4-30ರಿಂದ ಮತ ಎಣಿಕೆ ಶುರುವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...