ಶಿವಮೊಗ್ಗ | ವಿವಿಗಳಲ್ಲಿ ನಡೆಯುವ ಸಂಶೋಧನೆಗಳನ್ನು ರೈತರು ಬಳಸಿಕೊಳ್ಳಬೇಕು: ಬಸವರಾಜಪ್ಪ

Date:

ಕೃಷಿಗೆ ಸಂಬಂಧಿಸಿ ವಿಶ್ವವಿದ್ಯಾಲಯಗಳಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ರೈತರು ಅವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ ಕರೆ ನೀಡಿದರು.

ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಹಮ್ಮಿಕೊಂಡಿದ್ದ ಕೃಷಿ-ತೋಟಗಾರಿಕಾ ಮೇಳ-2024 ರ ಮೊದಲ ದಿನವಾದ ಇಂದು ತಾಂತ್ರಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

WhatsApp Image 2024 10 18 at 7.06.09 PM

“ಇವತ್ತು‌ ವಿಶ್ವವಿದ್ಯಾಲಯದವರು ಕೃಷಿಮೇಳದಲ್ಲಿ ತಾಂತ್ರಿಕ ಸಮಾವೇಶವನ್ನು ಹಮ್ಮಿಕೊಂಡಿರುವುದು ಸಂತಸದ ಸಂಗತಿ. ಪೌಷ್ಟಿಕ ಆಹಾರವನ್ನು ನಾವು ಊಟ ಮಾಡಬೇಕು. ಜೊತೆಯಲ್ಲಿರುವವರಿಗೂ ಕೊಡುವ ಕೆಲಸ ಮಾಡಬೇಕು. ಹಿಂದಿನ ಒಕ್ಕಲುತನದಲ್ಲಿನ ಕೃಷಿ ಜ್ಞಾನವನ್ನ ಬಳುವಳಿಯಾಗಿ ಪಡೆದುಕೊಂಡು ಸುಸ್ಥಿರ ಕೃಷಿ ಮಾಡುತ್ತಿದ್ದೇವು. ಕೃಷಿ ಸಂಸ್ಕೃತಿಯನ್ನ ಸಂತೋಷದಿಂದ ಮಾಡುತ್ತಾ ಒಳ್ಳೆಯ ಆಹಾರವನ್ನು ನೀಡುತ್ತಿದ್ದೆವು. ರಾಸಾಯನಿಕ, ಕೀಟನಾಶಕ ಉಪಯೋಗಿಸದೆ ಬೆಳೆ ಬೆಳೆಯುತ್ತಿದ್ದೆವು. ಆದರೆ ಇತ್ತೀಚಿನ ದಿನಗಳಲ್ಲಿ ದೇಶದ ಜನತೆಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಹೈಬ್ರೀಡ್ ತಳಿಗಳನ್ನ ಪರಿಹಾರವಾಗಿ ಕಂಡುಕೊಂಡು ಬಿಟ್ಟಿರುವುದು ದುರ್ದೈವ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಗಳು ಹೈಬ್ರಿಡ್ ತಳಿಗಳನ್ನ ಪರಿಹಾರವಾಗಿ ಕಂಡುಕೊಟ್ಟು ಅದಕ್ಕೆ ಬೇಕಾದ ಸವಲತ್ತುಗಳನ್ನು ಕೊಟ್ಟರು. ನಾವು ಬೆಳೆ ಬೆಳೆದೆವು, ಇದರಿಂದ ನಮ್ಮ ಆರೋಗ್ಯದ ಜೊತೆಗೆ ದೇಶದ ಜನರ ಆರೋಗ್ಯ ಕೆಡಲು ಶುರುವಾಯಿತು. ಈಗ ಮತ್ತೆ ನಾವು ಹಿಂದಿನ ಪದ್ದತಿಯ ಕಡೆ ತಿರುಗಿ ನೋಡುತ್ತಿದ್ದೇವೆ. ಸಾವಯವ ಕೃಷಿ ಅನುಸರಿಸುವ ಬಗ್ಗೆ ಮುಖ ಮಾಡುತ್ತಿದ್ದೇವೆ. ರೈತರು ಬೆಳೆ ಬೆಳೆಯುವ ವಿಧಾನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇಂತಹ ತಾಂತ್ರಿಕ ಸಮಾವೇಶಗಳ ಮೂಲಕ ಪಡೆದುಕೊಳ್ಳಬೇಕು ಎಂದು ಹೆಚ್.ಆರ್ ಬಸವರಾಜಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಕುಲಪತಿಗಳಾದ ಜಗದೀಶ್, ಸಂಪನ್ಮೂಲ ವ್ಯಕ್ತಿಗಳಾದ ಡಾ. ವಿನಾಯಕ ಹೆಗ್ಡೆ, ಎ ಬಿ ಪಾಟೀಲ್, ಶ್ರೀಕಾಂತ್ ಬರುವೆ, ಮಲ್ಲಿಕಾರ್ಜುನ ಯಲವಟ್ಟಿ ಮೊದಲಾದವರು ಹಾಜರಿದ್ದರು.

WhatsApp Image 2024 10 18 at 7.06.09 PM 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...