ಶಿವಮೊಗ್ಗ | ರೈತರು ದೃತಿಗೆಡಬಾರದು, ಸರ್ಕಾರ ರೈತರ ಪರವಾಗಿದೆ: ಸಚಿವ ಮಧು ಬಂಗಾರಪ್ಪ

Date:

ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ, ಯಾವುದೇ ರೈತರು ಧೃತಿಗೆಡಬಾರದು ಸರ್ಕಾರ ರೈತರ ಪರವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗ ನಗರದ ಲೋಕೋಪಯೋಗಿ ಭವನದಲ್ಲಿನ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅಕ್ಟೋಬರ್‌ 21ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ” ಎಂದರು.

“ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ. ಕೋರ್ಟ್ ವಿಚಾರ ಸೂಕ್ಷ್ಮವಾಗಿದ್ದು, ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಹೋರಾಟ ನಡೆಯುತ್ತಿದೆ. ರೈತರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಲ್ಲ” ಎಂದು ಹೇಳಿದರು.

“ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ. 2015ರೊಳಗೆ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ರೀತಿಯ ನೋಟಿಸ್ ನೀಡುವುದು, ತೊಂದರೆ ನೀಡದಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲ ರೀತಿಯ ಭೂ ಕಬಳಿಕೆ ಪ್ರಕರಣ ನಿರ್ವಹಿಸಲು ಜನಪ್ರತಿಧಿಗಳು ಮತ್ತು ಅಧಿಕಾರಿಗನ್ನೊಳಗೊಂಡ ಅರಣ್ಯ ಸಮಿತಿ ರಚನೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“2015ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ನೋಟಿಸ್‌ ನೀಡುವುದಾಗಲಿ, ಒಕ್ಕಲೆಬ್ಬಿಸುವುದಾಗಲಿ ಮಾಡಬಾರದು” ಎಂದು ಸೂಚನೆ ನೀಡಿದರು.

“ಕೋರ್ಟ್ ಪ್ರಕರಣ, ಲೋಕಾಯುಕ್ತ ಪ್ರಕರಣಗಳನ್ನು ಹೊರತುಪಡಿಸಿ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡುವಂತಿಲ್ಲ. ಸಣ್ಣ ಹಿಡುವಳಿದಾರರಿಗೆ ಯಾವುದೇ ರೀತಿಯಲ್ಲಿ ತೊಂದರೆ ಮಾಡಬಾರದು. 3 ಎಕರೆಗಿಂತ ಹೆಚ್ಚಿನ ಭೂಮಿ ಸಾಗುವಳಿ ಮಾಡುತ್ತಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು” ಎಂದು ಅರಣ್ಯ ಇಲಾಖೆ ಅಧಿಕಾರಿಳಿಗೆ ಸಚಿವರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಜಿಲ್ಲೆಯ 15 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

“ಗ್ರಾಮಗಳಲ್ಲಿ ಗ್ರಾಮ ಸಭೆ ಮಾಡಿ ಸಾಗುವಳಿದಾರರು, ಅವರ ಮಾಹಿತಿ ತೆಗೆದುಕೊಳ್ಳಬೇಕು. ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗಳನ್ನು ನಿರ್ವಹಿಸಲು ಶೀಘ್ರದಲ್ಲಿ ಸಮಿತಿ ರಚಿಸಲಾಗುವುದು” ಇಲಾಖೆ ಅಧಿಕಾರಿಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಶಾಸಕ ಬಲ್ಮೀಶ್ ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಾಗರ ಉಪವಿಭಾಗಾಧಿಕಾರಿ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...