ಶಿವಮೊಗ್ಗ | ನ.26ರಂದು ರೈತ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ ಜಾಥಾ

Date:

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತನ್ನು ಮರೆತು ದ್ರೋಹವೆಸಿಗಿವೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟದ ಕರೆಯ ಮೇರೆಗೆ ನವೆಂಬರ್ 26ರಂದು ರೈತ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಎಚ್‌ ಆರ್ ಬಸವರಾಜಪ್ಪ ಹೇಳಿದರು.

ಶಿವಮೊಗ್ಗ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕೇಂದ್ರ ಸರ್ಕಾರ ರೈತರ ಐತಿಹಾಸಿಕ ಹೋರಾಟದ ಸಂದರ್ಭದಲ್ಲಿ ಲಿಖಿತ ರೂಪದಲ್ಲಿ ಕೊಟ್ಟಿದ್ದ ಭರವಸೆಗಳನ್ನು ಈವರೆಗೂ ಈಡೇರಿಸಿಲ್ಲ. ರಾಜ್ಯ ಸರ್ಕಾರವೂ ಕೂಡಾ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿ ಈವರೆಗೂ ಹಿಂಪಡೆದಿಲ್ಲ” ಎಂದು ಆರೋಪಿಸಿದರು.

“ಕಳಸ ಬಂಡೂರಿ ಮಹಾದಾಯಿ ಯೋಜನೆಯನ್ನು ಪೂರ್ಣಗೊಳಿಸಬೇಕು. ಎಂಎಸ್‌ಪಿಯನ್ನು ಮೌಲ್ಯಾಧಾರಿತವಾಗಿ ಕಾನೂನುಬದ್ದಗೊಳಿಸಬೇಕು. ಕಾರ್ಮಿಕ ವಿರೋಧಿ ನೀತಿಗಳಹಿಂಡೆಯಬೇಕು. ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್ ಹುಕುಂ ಸಾಗುವಾಳಿದಾರರನ್ನು ಒಕ್ಕಲೆಬ್ಬಿಸಬಾರದು. ಇನ್ನೂ ಅನೇಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳು ಸಚಿವರು, ಅಧಿಕಾರಿಗಳು, ರೈತ ಹಾಗೂ ಕಾರ್ಮಿಕ ಸಂಘಟನೆ, ಪ್ರಗತಿಪರ ಸಂಘಟನೆಗಳ ಮುಖಂಡರು ಒಳಗೊಂಡಂತೆ 3 ದಿನಗಳ ಜನತಾ ಅಧಿವೇಶವನ್ನು ಕರೆಯಬೇಕು. ಈ ಎಲ್ಲ ವಿಚಾರವಾಗಿ ರಾಷ್ಟ್ರಾದ್ಯಂತ 500ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಎಚ್ಚರಿಕಾ ರ್‍ಯಾಲಿ ನಡೆಸುತ್ತಿದ್ದು, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಾವೂ ಕೂಡಾ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ ಎಂ ಚಂದ್ರಪ್ಪ, ಜಿಲ್ಲಾಧ್ಯಕ್ಷರಾದ ಕೆ ರಾಘವೇಂದ್ರ,
ಗ್ರಾಮಾಂತರ ಅಧ್ಯಕ್ಷ ಕಸಟ್ಟಿ ರುದ್ರೇಶ್, ಜಿಲ್ಲಾ ಹಸಿರುಸೇನೆ ಸಂಚಾಲಕ ಎಂ ಡಿ ನಾಗರಾಜ್, ತಾಲೂಕು ಅಧ್ಯಕ್ಷ ಸಿ ಚಂದ್ರಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...