ಶಿವಮೊಗ್ಗ | ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ ಬೆಂಕಿ ಅವಘಡ; ವ್ಯಾಪಾರಸ್ಥರಿಗೆ ಶೀಘ್ರ ನಷ್ಟ ಪರಿಹಾರ ನೀಡಲು ಆಗ್ರಹ

Date:

ಶಿವಮೊಗ್ಗದ ಗಾಂಧಿಬಜಾರ್‌ನ ಎರಡನೇ ತಿರುವಿನಲ್ಲಿರುವ ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ನಲ್ಲಿರುವ ಸ್ಟಾಲ್‌ಗಳಲ್ಲಿ ಕಳೆದ ಸೋಮವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿ, ಏಳಕ್ಕೂ ಹೆಚ್ಚು ಅಂಗಡಿಗಳಿಗೆ ನಷ್ಟವುಂಟಾಗಿತ್ತು. ಈ ವ್ಯಾಪಾರಿಗಳಿಗೆ ಪರಿಹಾರ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಅಗ್ನಿಶಾಮಕ ಸಿಬ್ಬಂದಿಯ ಸಾಹಸದಿಂದಾಗಿ 200ಕ್ಕೂ ಹೆಚ್ಚು ಸ್ಟಾಲ್‌ ಮಾದರಿ ಅಂಗಡಿಗಳಿರುವ ಬಟ್ಟೆ ಮಾರ್ಕೆಟ್‌ನಲ್ಲಿ ದೊಡ್ಡ ದುರಂತ ಸಂಭವಿಸುವುದು ತಪ್ಪಿತ್ತು. ಸೋಮವಾರ ರಾತ್ರಿ 9:30ರ ಸುಮಾರಿಗೆ ಮುಚ್ಚಿದ್ದ ಮಳಿಗೆಗಳಿಂದ ಹೊಗೆ ಬರುವುದನ್ನ ಗಮನಿಸಿದ ಯುವಕರು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಮೂಲಕ ದೊಡ್ಡಮಟ್ಟದ ಅವಘಡವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದ ಸ್ಥಳಕ್ಕೆ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ಮತ್ತು ತಹಶೀಲ್ದಾರ್ ಮತ್ತು ಮಹಾನಗರ ಪಾಲಿಕೆ ಆಯುಕ್ತರು,ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಯೋಗೇಶ್ ಕೂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ರಾಘವೇಂದ್ರ 1
ರಾಘವೇಂದ್ರ, ಬಟ್ಟೆ ಮಾರುಕಟ್ಟೆ ಜವಳಿ ವ್ಯಾಪಾರ ಸಂಘದ ಪ್ರಧಾನ ಕಾರ್ಯದರ್ಶಿ

“ಅತೀ ಹೆಚ್ಚು ಬಡ ಮಧ್ಯಮ ವರ್ಗದ ವ್ಯಾಪಾರಸ್ಥರು ವ್ಯಾಪಾರ ಮಾಡುತ್ತಿರುವ ಕಾರಣ ಸೋಮವಾರದ ಘಟನೆಯಿಂದ ಕಂಗಾಲಾಗಿದ್ದು ತಕ್ಷಣ ಪರಿಹಾರ ಒದಗಿಸಿ ಕೊಡಬೇಕು. ಉಸ್ತುವಾರಿ ಸಚಿವರು ಸಾಧ್ಯವಾದಷ್ಟು ಬೇಗ ನಮಗೆ ಪರಿಹಾರ ಒದಗಿಸಿಕೊಡಬೇಕು” ಎಂದು ಬಟ್ಟೆ ಮಾರುಕಟ್ಟೆ ಜವಳಿ ವ್ಯಾಪಾರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಈ.ದಿನ.ಕಾಮ್ ಮೂಲಕ ಅಗ್ರಹಿಸಿದರು.

ಜೆಡಿಎಸ್ 4
ಜೆಡಿಎಸ್ ಮುಖಂಡ ಪ್ರಸನ್ನ ಕುಮಾರ್

ಜೆಡಿಎಸ್ ಮುಖಂಡರಾದ ಪ್ರಸನ್ನ ಕುಮಾರ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಇಲ್ಲಿ ಬಡ ಮಧ್ಯಮ ವರ್ಗದ ವ್ಯಾಪಾರಸ್ಥರು ಹೆಚ್ಚಾಗಿ ವ್ಯಾಪಾರ ಮಾಡುತ್ತಿದ್ದಾರೆ. ಈ ಪ್ರದೇಶವು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಬರುವ ಕಾರಣ ಇವರುಗಳಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು. ವ್ಯಾಪಾರ ಮಾಡುತ್ತಿರುವ ಸ್ಥಳವನ್ನು ಹೊಸದಾಗಿ ನೂತನ ಕಟ್ಟಡ ರೀತಿಯಲ್ಲಿ ಬದಲಾವಣೆ ಮಾಡಬೇಕು” ಎಂದು ಒತ್ತಾಯಿಸಿದರು. ವ್ಯಾಪಾರಸ್ಥರ ಅಳಲು ಆಲಿಸಿ, ಸಾಂತ್ವನ ಹೇಳಿದರು.

ಬೆಂಕಿ 8

ಸ್ಥಳೀಯ ವ್ಯಾಪಾರಸ್ಥ ಮಸ್ತಾನ್ ಮಾತನಾಡಿ, “ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ನಲ್ಲಿ ತುಂಬಾ ಇಕ್ಕಟ್ಟಿನಿಂದ ವ್ಯಾಪಾರ ಮಾಡುತ್ತಿದ್ದೇವೆ. ಸರಿಯಾದ ವ್ಯವಸ್ಥೆ ಇಲ್ಲ. ಹೊಸದಾಗಿ ಒಂದು ಕಾಂಪ್ಲೆಕ್ಸ್ ರೀತಿಯಲ್ಲಿ ಕಟ್ಟಡವನ್ನು ಮಹಾನಗರ ಪಾಲಿಕೆ ವತಿಯಿಂದ ಮಾಡಿ, ಅಲ್ಲಿ ಅನುಕೂಲ ಮಾಡಿಕೊಟ್ಟರೆ ಇನ್ನೂ ಉತ್ತಮವಿತ್ತು. ಜನರು ಕೂಡ ಬರುವಂತಹ ಸ್ಥಳವಾಗಿದ್ದರೆ ಉತ್ತಮ” ಎಂದು ತಿಳಿಸಿದರು.

 

shimoga 1
ಬೆಂಕಿ 1 2 ಬೆಂಕಿ 3 1
WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...