ಶಿವಮೊಗ್ಗ | ಜಾನಪದ ಸಮ್ಮೇಳನ; ಕಿನ್ನರ ಜೋಗಿ ಕಲಾವಿದ ಕೆ ಗುಡ್ಡಪ್ಪ ಜೋಗಿಯವರಿಗೆ ರಾಷ್ಟ್ರೀಯ ಪ್ರಶಸ್ತಿ

Date:

ಕಿನ್ನರ ಜೋಗಿ ಕಲಾವಿದ ಕೆ ಗುಡ್ಡಪ್ಪ ಜೋಗಿ ಹೊಸೂರು ಸಾಗರರವರು ನಾಡೋಜ ಎಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಾನಪದ ಲೋಕ ನಿರ್ಮಾತೃ ನಾಡೋಜ ಎಚ್ ಎಲ್ ನಾಗೇಗೌಡರು ಕಟ್ಟಿ ಬೆಳೆಸಿದ ಕರ್ನಾಟಕ ಜಾನಪದ ಪರಿಷತ್ತಿನಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಜಾನಪದ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ವ್ಯಕ್ತಿಯನ್ನು ಗುರುತಿಸಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತದೆ.

ಪ್ರಸ್ತುತ ವರ್ಷ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೊಸೂರಿನ ಆಕಾಶವಾಣಿ, ದೂರದರ್ಶನ ಕಲಾವಿದರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಕಿನ್ನರಜೋಗಿ ಜಾನಪದ ಕಲಾವಿದ ಗುಡ್ಡಪ್ಪ ಜೋಗಿ ಅವರಿಗೆ ನಾಡೋಜ ಎಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ ಗುಡ್ಡಪ್ಪ ಜೋಗಿಯವರು ಕಳೆದ ಹಲವು ದಶಕಗಳಿಂದ ತಮ್ಮ ತಂಡದೊಂದಿಗೆ ಸರ್ಕಾರದ ಜನಜಾಗೃತಿ ಯೋಜನೆಗಳ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಮುಖ್ಯವಾಗಿ ಅಕ್ಷರತುಂಗ, ಭ್ರೂಣಲಿಂಗ ಪತ್ತೆ, ಪಲ್ಸ್ ಪೋಲಿಯೋ, ಎಚ್ಐವಿ ಏಡ್ಸ್ ಸೋಂಕು ತಡೆ, ಕ್ಷಯರೋಗ, ಅಯೋಡಿನ್ ಕೊರತೆ ಮತ್ತು ಅರಣ್ಯ ಇಲಾಖೆಯ ಪಶ್ಚಿಮ ಘಟ್ಟದ ಕಾಡು ಮತ್ತು ಕಾಡುಪ್ರಾಣಿ ಉಳಿಸಿ ಅಭಿಯಾನಗಳ ಮೂಲಕ ರಾಜ್ಯಾದ್ಯಂತ ತಿರುಗಾಡಿ ಜನಜಾಗೃತಿ ಮೂಡಿಸಿದ್ದಾರೆ.

ಗುಡ್ಡಪ್ಪ ಜೋಗಿಯವರು ತಮ್ಮ ಇಳಿ ವಯಸ್ಸಿನಲ್ಲಿ ವೇದಿಕೆ ಏರುವಾಗ ತಲೆಗೆ ಕೆಂಪು ಬಣ್ಣದ ಜರಿ ರುಮಾಲು ಕಟ್ಟಿ, ಕಪ್ಪು ಕೋಟು ಧರಿಸಿ, ಮಣಿಹಾರ ಧರಿಸಿಕೊಂಡು, ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಕೈಯಲ್ಲಿ ಕಿನ್ನೂರಿ ಅಥವಾ ಚಿಟುಕು ಹಿಡಿದುಕೊಂಡರೆ ಲಾವಣಿ ಗೀಗಿ ಪದ ಅಶು ಕತೆ ಪೌರಾಣಿಕ ಕಥೆ ಜಾನಪದ ವಿದ್ವಾಂಸರು ಪುಟಗಟ್ಟಲೆ ಬಣ್ಣಿಸುವ ಜಾನಪದ ಶ್ರೀಮಂತಿಕೆ ಸೊಗಸುಗಾರಿಕೆ, ಸೊಗಡು ಇಂಪು ಗುಡ್ಡಪ್ಪ ಜೋಗಿಯವರ ಬಾಯಲ್ಲಿ ಹೊರಹೊಮ್ಮಿದಾಗ ಕಲಾಪ್ರೇಕ್ಷಕರನ್ನು ಮಂತ್ರ ಮಗ್ದರನ್ನಾಗಿಸುತ್ತಿತ್ತು. ‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾನಪದ ಸಮ್ಮೇಳನ; ಬುರ್ರಕಥಾ ಕಮಲಮ್ಮನವರಿಗೆ ಅಭಿನಂದನಾಪೂರ್ವಕ ಗೌರವ ಸನ್ಮಾನ

ಜಾನಪದ ಕಲಾವಿದ ಕೆ ಗುಡ್ಡಪ್ಪ ಜೋಗಿ ಅವರಿಗೆ ಪ್ರಶಸ್ತಿ ದೊರಕಿರುವುದಕ್ಕೆ ಶಿವಮೊಗ್ಗ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಿ ಮಂಜುನಾಥ್, ಕಾರ್ಯದರ್ಶಿ ಎಂಎಂ ಸ್ವಾಮಿ, ಸಾಗರ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿ ಟಿ ಸ್ವಾಮಿ, ಜಿ ನಾಗೇಶ್, ಕಾ.ಸ.ಪ ಹೋಬಳಿ ಘಟಕ ಅಧ್ಯಕ್ಷ ಬಿ ಡಿ ರವಿಕುಮಾರ್, ಪ್ರಮುಖರಾದ ಸತ್ಯನಾರಾಯಣ ಸಿರುವಂತೆ, ಸ್ವಾಮಿರಾವ್ ಗುಡುವಿ, ಗಣಪತಿ ಯಡೆಹಳ್ಳಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

ನವೆಂಬರ್ ತಿಂಗಳ 22ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

ವರದಿ : ಅಮಿತ್ ಆರ್, ಆನಂದಪುರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...