ಶಿವಮೊಗ್ಗ | ಗೌರಿ ಹಂತಕರಿಗೆ ಸನ್ಮಾನ; ಜಾಮೀನು ವಜಾಕ್ಕೆ ಆಗ್ರಹ

Date:

ಗೌರಿ ಹಂತಕರಿಗೆ ಸನ್ಮಾನ ಮಾಡಿದ್ದು, ಜತೆಗೆ ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್‌ ಮತ್ತು ಗೌರಿ ಬಳಗದಿಂದ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಪ್ರಮುಖರು, “ಗೌರಿ ಹಂತಕರನ್ನು ಸನ್ಮಾನ ಮಾಡಿದವರನ್ನು ಶಿಕ್ಷೆಗೊಳಪಡಿಸಬೇಕು. ಅಲ್ಲದೆ ಗೌರಿ ಹಂತಕರ ಜಾಮೀನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಗೌರಿ ಹಂತಕರ ವಿರುದ್ಧ

“ಗೌರಿ ಹಂತಕರಿಗೆ ಶಿಕ್ಷೆಯಾಗಬೇಕೆಂದು ದೇಶ, ವಿದೇಶದಲ್ಲಿ ಆಗ್ರಹ ಕೇಳಿಬಂದಿತ್ತು. ಬಂಧಿತರ ಪೈಕಿ ಇಬ್ಬರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಪೈಕಿ ಒಬ್ಬನಿಗೆ ಸನ್ಮಾನ ನಡೆದಿದೆ. ಮತ್ತೊಬ್ಬನಿಗೆ ಚುನಾವಣೆ ಉಸ್ತುವಾರಿ ವಹಿಸಲಾಗಿದೆ. ಕರ್ನಾಟಕದಲ್ಲಿ ವೈಚಾರಿಕ ಭಿನ್ನಾಭಿಪ್ರಾಯವಿತ್ತು. ಆದರೆ ಈಗ ಒಬ್ಬನಿಗೆ ಸನ್ಮಾನ ಮಾಡಿ ಮತ್ತಷ್ಟು ಕೊಲೆಗಳಿಗೆ ಪ್ರಚೋದನೆ ನೀಡಿದಂತಾಗಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರಗತಿಪರ ಚಿಂತಕ ಕೆ ಎಲ್ ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಗೌರಿ ಹಂತಕರ ವಿರುದ್ಧ 2

ಚಿಂತಕ ಚಂದ್ರೇಗೌಡ ಮಾತನಾಡಿ, “ಸಂಚು ರೂಪಿಸಿ ಗೌರಿಯ ಹತ್ಯೆ ಮಾಡಲಾಯಿತು. ಕೊಲೆ ಆರೋಪಿಗಳಿಗೆ ಸನ್ಮಾನ ಮಾಡುವುದು ಸರಿಯಲ್ಲ. ಪ್ರಪಂಚದಲ್ಲಿ ಎಲ್ಲೂ ನಡೆಯದ ಕೃತ್ಯವಿದು. ಗೌರಿಯನ್ನು ಕೊಂದಿರಬಹುದು. ಆದರೆ ಆಕೆಯ ಧ್ವನಿ ಅಡಗಿಸಲು ಸಾಧ್ಯವಿಲ್ಲ” ಎಂದರು.

ಗೌರಿ ಹಂತಕರ ವಿರುದ್ಧ 1

“ನಾವು ಅಹಿಂಸೆ, ಗಾಂಧಿ, ಗೌರಿಯನ್ನು ಪ್ರೀತಿಸುತ್ತೇವೆ. ನಮ್ಮ ಹೋರಾಟವನ್ನು ಸರ್ಕಾರ ಗಮನಿಸಬೇಕು‌. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಸಾಹಿತಿ ಉಷಾ ಒತ್ತಾಯಿಸಿದರು.

ಗೌರಿ ಹಂತಕರ ವಿರುದ್ಧ 3

“ಆರೋಪಿಗಳು ನಿರ್ದೋಷಿಗಳೆಂದು ಬಿಡುಗಡೆಯಾಗಿರುವುದಲ್ಲ. ಐದಾರು ವರ್ಷ ಅವರಿಗೆ ಜಾಮೀನು ದೊರೆತಿರಲಿಲ್ಲ‌. ಮುಖ್ಯ ಸಾಕ್ಷಿಗಳ ವಿಚಾರಣೆ ಮುಗಿದ ಹಿನ್ನಲೆ ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಆದರೆ ಇಂತಹವರಿಗೆ ಸನ್ಮಾನ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಸಿದ್ದರಾಮಯ್ಯ ಸರ್ಕಾರ ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು” ವಕೀಲ ಕೆ ಪಿ ಶ್ರೀಪಾಲ್‌ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ; ಓರ್ವನ ಬಂಧನ: ಇನ್ನುಳಿದವರಿಗಾಗಿ ಹುಡುಕಾಟ

ಪ್ರಮುಖರಾದ ಶೃಂಗೇಶ್‌, ಟೆಲೆಕ್ಸ್‌ ರವಿಕುಮಾರ್‌, ಶಿವಕುಮಾರ್‌, ಅನಿಲ್‌, ಹಾಲೇಶಪ್ಪ ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...