ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

Date:

ಶಿವಮೊಗ್ಗ ಸರ್ಕಾರಿ ಶಾಲೆಯ ಶಿಕ್ಷಕಿ ನಿವೃತ್ತಿ ಹೊಂದಿದಾಗ ಹಳೆ ವಿದ್ಯಾರ್ಥಿಗಳುಬಾಬಾಸಾಹೇಬ್ ಅಂಬೇಡ್ಕರ್ ಫೋಟೋ ನೀಡುವ ಮೂಲಕ ಬೀಳ್ಕೊಟ್ಟರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿಳ್ ಘಟ್ಟ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಕುಮಾರ್ ಮತ್ತು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಸ್ತಾನ್ ಆರ್ ಹಾಗೂ ಸಾಮಾಜಿಕ ಮುಖಂಡರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿದರು.

“ಶಿಕ್ಷಕಿ ಶಶಿಯವರ ನಿವೃತ್ತಿ ಜೀವನ ಸುಖಕರವಾಗಿರಲಿ” ಎಂದು ಹಾರೈಸುತ್ತ ವಿದ್ಯಾರ್ಥಿಗಳು ಅವರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಫೋಟೋ ನೀಡುವ ಮೂಲಕ ಸನ್ಮಾನಿಸಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕಿ ಶಶಿಯವರು ವಿದ್ಯಾರ್ಥಿಗಳಿಗೆ ಸಾಕಷ್ಟು ಉತ್ತಮವಾದ ಜೀವನ ರೂಪಿಸಿಕೊಳ್ಳಲು ಉತ್ತಮ ಶಿಕ್ಷಣ ನೀಡಿದ್ದಾರೆ” ಎಂದು ಹಳೆ ವಿದ್ಯಾರ್ಥಿಗಳು ಸ್ಮರಿಸಿದರು.

“ಶಿವಕುಮಾರ್ ಶಿವಮೊಗ್ಗ ನಗರದಲ್ಲಿ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದು, ಪರಿಶಿಷ್ಟ ಜಾತಿಯವರ ಸಮಸ್ಯೆಗಳನ್ನು ಬಗೆಹರಿಸುವತ್ತ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅನೇಕ ರೀತಿಯ ಸಾಮಾಜಿಕ ಕೆಲಸದಲ್ಲಿ ನಿರತರಾಗಿದ್ದಾರೆ. ಹಾಗಾಗಿ ಶಶಿ ಶಿಕ್ಷಕರ ಮಾರ್ಗದರ್ಶನ ಅಭಿನಂದನೀಯ. ಅನೇಕರಿಗೆ ಇವರು ಉತ್ತಮ ಶಿಕ್ಷಣ ನೀಡಿದ್ದಾರೆ” ಎಂದು ಹೇಳುತ್ತ ಅನೇಕ ವಿಶೇಷ ವಿಷಯಗಳನ್ನು ಸ್ಮರಿಸಿದರು.

ನಿವೃತ್ತ ಶಿಕ್ಷಕಿ ಶಶಿಕಲಾ ಮಾತನಾಡಿ, “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಒಳ್ಳೆ ಭವಿಷ್ಯ ರೂಪಿಸಿಕೊಳ್ಳುವ ಮುಖಾಂತರ ಸತ್ಪ್ರಜೆಗಳಾಗಿ ಸಮಾಜಕ್ಕೆ, ಪೋಷಕರಿಗೆ ಶಿಕ್ಷಕರಿಗೆ ಹೆಸರು ಕೀರ್ತಿ ತನ್ನಿ. ಯಾವಾಗಲೂ ಸಮಾಜಮುಖಿಯಾಗಿರಿ” ಎಂದು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಈ ಸುದ್ದಿ ಓದಿದ್ದೀರಾ? ಗೃಹಸಚಿವ ಅಮಿತ್ ಶಾ ವಿರುದ್ಧ ಜ.9ರಂದು‌ ʼವಿಜಯನಗರ ಬಂದ್’ಗೆ ಕರೆ

ನಂತರ ಶಾಲೆ ವಿದ್ಯಾರ್ಥಿಗಳು ಕಣ್ಣು ತುಂಬಿ ದುಃಖಿಸಿ ನೀವೇ ಶಿಕ್ಷಕರಾಗಿ ಮುಂದುವರಿಯಲು ಕೇಳಿಕೊಂಡರು ಅದಕ್ಕೆ ಶಿಕ್ಷಕರು ಆಗಾಗ ಶಾಲೆಗೆ ಬಂದು ಹೋಗುತ್ತೇನೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕಿ ಜಾಹ್ನವಿ, ಶಿಕ್ಷಕ ಸಂಘದ ಅಧಿಕಾರಿಗಳು, ಸಮನ್ವಯ ಅಧಿಕಾರಿಗಳು, ಮಿಳ್ ಘಟ್ಟ ಕ್ಲಸ್ಟರ್ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕಿ ಭಾಗ್ಯಲಕ್ಷ್ಮಿ ಸೇರಿದಂತೆ ಪೋಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...