ಶಿವಮೊಗ್ಗ | ಭಾರೀ ಮಳೆಗೆ ಅಪಾರ ಆಸ್ತಿಪಾಸ್ತಿ, ಬೆಳೆಹಾನಿ; ಕಂಗಾಲಾದ ರೈತರು

Date:

ಮೊನ್ನೆರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿದ್ದು, ರೈತರು ಬೆಳೆದ ಶುಂಠಿ, ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.

ಆಚಾಪುರ ಗ್ರಾಮ ಪಂಚಾಯಿತಿಯ ತಂಗಳವಾಡಿ ಗ್ರಾಮದ ಅಮ್ಮನ ಕೆರೆಯ ಕೋಡಿ ಕಾಲುವೆ ಒಡೆದು ಅಡಿಕೆ ತೋಟ, ಭತ್ತದ ಗದ್ದೆ, ಶುಂಠಿ ಬೆಳೆಗಳು ಕೊಚ್ಚಿ ಹೋಗಿ ಅಪಾರ ಹಾನಿ ಸಂಭವಿಸಿದೆ. ಗಿಳಾಲಗುಂಡಿ ಅಮ್ಮನ ಕೆರೆ ಕೋಡಿ ಕಾಲುವೆ ಒಡೆದ ಪರಿಣಾಮ, ಗಿಳಾಲ ಗುಂಡಿಯ ಬಸ್ ನಿಲ್ದಾಣ ಸಂಪೂರ್ಣ ಕೊಚ್ಚಿ ಹೋಗಿದೆ.

ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿದ ಸೋಮಶೇಖ‌ರ್ ಲಾವಿಗೆರೆ ಮಾತನಾಡಿ, “ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ರಸ್ತೆ ಮೋರಿ, ಅಮ್ಮನ ಕೆರೆಯ ಕೋಡಿ ಕಾಲುವೆಯ ನೀರು ಹರಿದ ಕಾರಣ ರೈತರು ಬೆಳೆದಂತಹ ಶುಂಠಿ ಮತ್ತು ಭತ್ತದ ಗದ್ದೆಗಳಿಗೆ ಅಪಾರ ಹಾನಿ ಸಂಭವಿಸಿದೆ. ಗಿಳಾಲ ಗುಂಡಿ, ಕೆರೆ ಹಿತ್ತಲು, ಪತ್ರೆ ಹೋಂಡಾ, ತಂಗಳವಾಡಿ ಸೇರಿದಂತೆ ಆನೇಕ ಭಾಗದಲ್ಲಿ ಮಳೆಯಿಂದ ರಸ್ತೆಗಳು, ಕಾಲು ಸೇತುವೆ, ಕಾಲುವೆಗಳು, ಕಿರು ಸೇತುವೆ ಕೊಚ್ಚಿ ಹೋಗಿದ್ದು, 5 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ. ಹಾನಿಯಾದ ಬಗ್ಗೆ ಸಂಪೂರ್ಣ ವರದಿ ಸಂಗ್ರಹಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಳ; ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಸೂಚನೆ

ರಮಾನಂದ್ ಸಾಗರ್ ಮಾತನಾಡಿ, “ಕಳೆದ ರಾತ್ರಿ ಸುರಿದ ಮಳೆಯಿಂದ ರೈತರಲ್ಲಿ ಆತಂಕ ಉಂಟಾಗಿತ್ತು. ರೈತರು ಬೆಳೆದ ಬೆಳೆ ಕೈಸೇರುವ ಮೊದಲೇ ಮಳೆಗೆ ಆಹುತಿಯಾಗಿದೆ. ಇದರಿಂದ ರೈತರಿಗೆ ತುಂಬಲಾರದ ನಷ್ಟ ಸಂಭವಿಸಿದೆ” ಎಂದರು.

ಮಳೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಚಂದ್ರಶೇಖರ್ ನಾಯಕ್, ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್, ಚೇತನ್ ರಾಜ್ ಕಣ್ಣೂರ್, ಕಲೀಮುಲ್ಲಾ ಖಾನ್, ರೆಹಮತ್ ತುಲ್ಲಾ, ಕಂದಾಯ ಅಧಿಕಾರಿ ಕವಿರಾಜ್, ಕೃಷಿ ಅಧಿಕಾರಿ ಚಂದ್ರ ಕುಮಾರ್ ಸೇರಿದಂತೆ ಬಹುತೇಕರು ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...