ಶಿವಮೊಗ್ಗ | 30 ಲಕ್ಷ ಆಸೆಗೆ ಅಕೌಂಟ್ ನಂಬರ್​ ಕೊಟ್ಟು 3.71 ಲಕ್ಷ ಕಳೆದುಕೊಂಡ ಗೃಹಿಣಿ

Date:

ಶಿವಮೊಗ್ಗ, ಮಹಿಳೆಯೊಬ್ಬರು ಬರೋಬ್ಬರಿ 30 ಲಕ್ಷ ರೂಪಾಯಿ ಬಹುಮಾನದ ಆಸೆಗೆ ಬಲಿಯಾಗಿ 3,71,400 ರೂಪಾಯಿಗಳನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್​ಬಿಐ) ಲೋಗೋವನ್ನು ಹಾಕಿಕೊಂಡು, ತಾನು ಬ್ಯಾಂಕ್ ವ್ಯವಸ್ಥಾಪಕ (ಮ್ಯಾನೇಜರ್) ಎಂದು ಪರಿಚಯಿಸಿಕೊಂಡಿದ್ದಾನೆ.

ಆತ ಸಂದೇಶ ಕಳುಹಿಸಿ, “ನೀವು 30 ಲಕ್ಷ ರೂಪಾಯಿಗಳ ಬಹುಮಾನವನ್ನು ಗೆದ್ದಿದ್ದೀರಿ” ಎಂದು ನಂಬಿಸಿದ್ದಾನೆ. ಈ ಸಂದೇಶದಿಂದ ಸಂತೋಷಗೊಂಡ ಮಹಿಳೆ ಆತನ ಮಾತನ್ನು ಸಂಪೂರ್ಣವಾಗಿ ನಂಬಿದ್ದಾರೆ. ತದನಂತರ, ಆ ಅಪರಿಚಿತ ವ್ಯಕ್ತಿ “ನಿಮ್ಮ ಖಾತೆಗೆ ಬಹುಮಾನದ ಹಣವನ್ನು ವರ್ಗಾಯಿಸಲು ಖಾತೆ ಸಂಖ್ಯೆಯನ್ನು ನೀಡಿ” ಎಂದು ಹೇಳಿ ಮಹಿಳೆಯನ್ನು ನಂಬುವಂತೆ ಮಾಡಿದ್ದಾನೆ. ಆತನ ಮಾತನ್ನು ನಂಬಿದ ಮಹಿಳೆ ತಮ್ಮ ಬ್ಯಾಂಕ್ ಖಾತೆಯ ಸಂಖ್ಯೆಯನ್ನು ಆತನಿಗೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ, ಆ ವಂಚಕನು ಮಹಿಳೆಗೆ, “ನಿಮ್ಮ ಖಾತೆಗೆ ಲಾಟರಿ ಹಣವನ್ನು ವರ್ಗಾವಣೆ ಮಾಡಬೇಕಾದರೆ, ಅದಕ್ಕೆ ಸರ್ವಿಸ್ ಶುಲ್ಕ (ಸರ್ವರ್ ಚಾರ್ಜ್), ತೆರಿಗೆ (ಟ್ಯಾಕ್ಸ್) ಮತ್ತು ಇತರೆ ಕಾರಣಗಳನ್ನು ನೀಡಿ” ಒಟ್ಟು 3,71,400 ರೂಪಾಯಿಗಳ ಹಣವನ್ನು ಹಂತ ಹಂತವಾಗಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ.

ಈ ವಂಚನೆಗೆ ಒಳಗಾದ ಮಹಿಳೆ ತಡಮಾಡದೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...