ಶಿವಮೊಗ್ಗ | ಪತಿ-ಪತ್ನಿ ಕಲಹ : ಬೆಂಕಿ ಹಚ್ಚಿಕೊಂಡು ಪತ್ನಿ ಸಾವು

Date:

ಶಿವಮೊಗ್ಗ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್ ಪೊಲೀಸರ ಬಂಧನಕ್ಕೆ ಒಳಗಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸುಮಾರು 20 ದಿನಗಳ ಹಿಂದೆ ಗಿರಿಜಾ ಮನೆಯಲ್ಲೇ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ, ಎಲ್ಲ ಪ್ರಯತ್ನಗಳೂ ವಿಫಲವಾಗಿ, ಜುಲೈ 17ರಂದು ಅವರು ಕೊನೆಯುಸಿರೆಳೆದರು.ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...