ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

Date:

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ, ಇಲ್ಲಿ ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನದಲ್ಲಿ ʼಕ್ಷೇತ್ರದ ರಕ್ಷಣೆ ನನ್ನದು’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹೇಳಿದರು.

ಸಾಗರ ವಿಧಾನಸಭಾ ಕ್ಷೇತ್ರದ ತುಮರಿ, ಬ್ಯಾಕೋಡು, ಎಸ್‌ ಎಸ್ ಭೋಗ್, ಹೆರಬೆಟ್ಟು, ಅರಳಗೋಡು, ಭಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಮಲೆನಾಡಿನ ಜನರ ಒಡಲ ಸಂಕಟವನ್ನು ಹತ್ತಿರದಿಂದ ಆಲಿಸುವ ಅವಕಾಶ ನನಗೆ ದೊರಕಿದೆ. ಇಲ್ಲಿನ ಸಮಸ್ಯೆಗಳ ಅಂತರಾಳ ಕೂಡ ಅರಿವಿಗೆ ಬಂದಿವೆ. ಇಲ್ಲಿ, ಕುಡಿಯುವ ನೀರು, ಬಗರ್ ಹುಕುಂ ಸಮಸ್ಯೆ, ಭೂ-ಹಕ್ಕು, ರಸ್ತೆ, ಸಾರಿಗೆ ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಜನರು ಅಳಲು ತೋಡಿಕೊಂಡಿದ್ದಾರೆ. ಆದ್ದರಿಂದ, ಇಲ್ಲಿ ಜನರ ನಾಡಿ ಮಿಡಿತಕ್ಕೆ ಹತ್ತಿರವಾಗಿ ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 15 ವರ್ಷದ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಸ್ಥಿತಿ-ಗತಿಯನ್ನೇ ಉನ್ನತ ಸ್ಥಾನಕ್ಕೆ ಏರಿಸಬಹುದಾಗಿತ್ತು. ಕೇಂದ್ರದ ಹಂತದಲ್ಲಿ ಅನೇಕ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿತ್ತು. ಆದರೂ, ಅದು ಸಾಧ್ಯವಾಗದಿರುವುದು ಆಶ್ಚರ್ಯ ಮೂಡಿಸುತ್ತದೆ” ಎಂದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ, ಸ್ಥಳೀಯ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು” ಎಂದು ಹೇಳಿದರು.

“ಜಿಲ್ಲೆಯಲ್ಲಿ ಸಚಿವ ಮಧುಬಂಗಾರಪ್ಪ ಅವರು ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಅದಕ್ಕೆ ಅನೇಕ ಹಿರಿಯ ನಾಯಕರು ಕೈ ಜೋಡಿಸಿದ್ದಾರೆ. ಅದೇ ರೀತಿ, ಕೇಂದ್ರದ ಹಂತದಲ್ಲಿ ಸಮಸ್ಯೆ ಪರಿಹರಿಸಲು ಹೆಚ್ಚು ಒತ್ತು ನೀಡುತ್ತೇನೆ” ಎಂದು ಭರವಸೆ ನೀಡಿದರು‌.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತ‌ನಾಡಿ, “ಕ್ಷೇತ್ರದಲ್ಲಿ ರೈತರ ಕೃಷಿ ಚಟುವಟಿಕೆ ಸೇರಿದಂತೆ, ಕುಡಿಯುವ ನೀರಿನ ಸಮಸ್ಯೆ ವ್ಯತಿರಿಕ್ತ ಹಂತ ತಲುಪಿದೆ. ಮುಂದಿನ ದಿನದಲ್ಲಿ ಶರಾವತಿ ನದಿ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು‌. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಟೀಕಿಸುತ್ತಿದ್ದಾರೆ. ಇಲ್ಲಿ, ಬಿಪಿಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ ಹರಸಬೇಕು” ಎಂದು ಕೋರಿದರು.

“ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪತ್ನಿ ಗೀತಾಗೆ ಕ್ಷೇತ್ರದ ಜನರು ಅವಕಾಶ ಕಲ್ಪಿಸಿಕೊಡಬೇಕು” ಎಂದರು. ‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

“ಮಲೆನಾಡಿನ ಸಮೃದ್ಧ ಹಸಿರು, ಗೀತಾಗೆ ಉಸಿರಾಗಬೇಕು. ಇದಕ್ಕೆ ಕ್ಷೇತ್ರದ ಮತದಾರರು ಆಶೀರ್ವದಿಸಬೇಕು. ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಹಾದಿಯಲ್ಲಿ ಸಾಗಲು ಗೀತಾಗೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕು” ಎಂದು ಮನವಿ ಮಾಡಿದರು.

ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ ಟಿ ಸತ್ಯನಾರಾಯಣ, ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಅಶೋಕ್ ಬೇಳೂರು, ಪ್ರಭಾವಾತಿ ಚಂದ್ರಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಂಕಾರ ಮುರಕ್ಕಿ, ಶ್ರೀದೇವಿ ರಾಮಚಂದ್ರ, ಪ್ರೇಮಾ ಸಂತೋಷ್, ರಘುಪತಿ ಹೋನಗೋಡು, ಸಂತೋಷ ಶೆಟ್ಟಿ, ಸುಧಾಕರ ಮಾವಿನಕೈ, ಆನಂದ ಬಾಳ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...