‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

Date:

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ ₹1ಲಕ್ಷ, ರೈತರ ಸಾಲ ಮನ್ನಾ ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹೇಳಿದರು‌.

‌ಶಿವಮೊಗ್ಗ ತಾಲೂಕಿನ ಸಿದ್ಲೀಪುರ, ಸನ್ಯಾಸಿ ಕೊಡಮಗ್ಗಿ, ಮುಂಗೋಟೆ, ಆನವೇರಿ, ನಿಂಬೆಗೊಂದಿ, ಸೈದರ ಕಲ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಅಧಿಕಾರ ಕೈಲಿದ್ದಾಗ ಕ್ಷೇತ್ರದ ಅಭಿವೃದ್ಧಿ ವಿಚಾರದ ಕುರಿತ ಧ್ವನಿ ಎತ್ತದ ಕೆಲವರು ನನ್ನ ಬಗ್ಗೆ ಟೀಕಿಸುತ್ತಿದ್ದಾರೆ. ಇದೆಲ್ಲದಕ್ಕೂ ಮುಂದಿನ ದಿನದಲ್ಲಿ ಉತ್ತರ ನೀಡಲಾಗುತ್ತದೆ. ಹಾಗಾಗಿ ಮತದಾರರು ನನಗೆ ಬೆಂಬಲ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲ ತಾಲೂಕಿನ ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ಕಾರ್ಯಕರ್ತರು ತಲುಪಿಸುತ್ತಿದ್ದಾರೆ‌. ಇದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, “ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ” ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, “ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಬೇಕು. ಇಲ್ಲಿ, ಕ್ಷೇತ್ರದ ಜನರ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ನಟ ಶಿವರಾಜಕುಮಾರ್, ನಿಗಮದ ಅಧ್ಯಕ್ಷ ರವಿಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ ಪಲ್ಲವಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಿಜಯ್ ಕುಮಾರ್ ಸಂತೇಕಡೂರು, ಜಿಲ್ಲಾ ಪಂಚಾಯಿತಿ ಸದಸ್ಯ ಶಾಂತಕುಮಾರ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಹನುಮಂತು, ಟಿ ನೇತ್ರಾವತಿ, ದೇವಿ ಕುಮಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...