ಶಿವಮೊಗ್ಗ ನಗರ ಜನತಾದಳ (ಜಾತ್ಯತೀತ)ದ ಅಧ್ಯಕ್ಷರಾಗಿ ದೀಪಕ್ ಸಿಂಗ್ ಮತ್ತು ಜಿಲ್ಲಾ ಉಪಾಧ್ಯಕ್ಷರಾಗಿ ಗೋವಿಂದಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶನಿವಾರ ನೇಮಕ ಮಾಡಿದರು.
“ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ ಜವಾಬ್ದಾರಿ ವಹಿಸಿಕೊಂಡು, ಜಿಲ್ಲೆಯಲ್ಲಿ ಜನತಾ ದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ” ಎಂದು ಹಾರೈಸಿದರು.
ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಛಾಪು ಮೂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ನಿಂದ ಎಂಎಲ್ಎ ಆಗಿದ್ದ ಪ್ರಸನ್ನಕುಮಾರ್ ಅವರ ಗೆಲುವಿಗೆ ಶ್ರಮ ವಹಿಸಿದ್ದವರು ದೀಪಕ್ ಸಿಂಗ್. ಅವರು ಕಳೆದ ವಿಧಾನಸಾಭಾ ಚುನಾವಣೆಯಲ್ಲಿ ಜನತಾ ದಳ (ಎಸ್) ಅನ್ನು ಬೆಂಬಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಗುಣಮಟ್ಟದ ಶಿಕ್ಷಣದಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯ: ಪಿ ಜಿ ಆರ್ ಸಿಂಧ್ಯ
ದೀಪಕ್ ಸಿಂಗ್ ಅವರನ್ನು ಶಿವಮೊಗ್ಗ ಜೆಡಿಎಸ್ ಅಧ್ಯಕ್ಷರಾಗಿ ಮಾಡುವ ಮೂಲಕ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ.





