ಶಿವಮೊಗ್ಗ | ಬಂಗಾರಪ್ಪ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

Date:

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ. ಅದೇ, ಕಾರಣಕ್ಕೆ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಬೆಳ್ಳೂರು ಗ್ರಾಮದಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಇಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮಾಜಿ ಶಾಸಕ ಹಾಲಪ್ಪ ಅವರು ಮುಳುಗಡೆ ರೈತರ ಕತ್ತು ಹಿಸುಕುತ್ತಿದ್ದಾರೆ. ಜಿಲ್ಲೆಯಲ್ಲಿ 15 ವರ್ಷ ಆಡಳಿತ ನಡೆಸಿದ್ದಾರೆ. ಆದರೆ,  ಕೇಂದ್ರ ಸರ್ಕಾರದ ಹಂತದಲ್ಲಿ ನೊಂದ ರೈತರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ರೈತರಿಗೆ ಹಕ್ಕು ಪತ್ರ ನೀಡಿದ್ದರು. ಆದರೆ, ಪ್ರಸ್ತುತ ಸಂಸದ ರಾಘವೇಂದ್ರ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು, ತಮ್ಮ ಆಸ್ತಿ ಇರುವ ಕಡೆ ಮಾತ್ರ ಅಭಿವೃದ್ಧಿ ಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ನೆಟ್ವರ್ಕ್ ಹುಡುಕಬೇಕು ಎಂದರೆ, ಬೆಟ್ಟ-ಗುಡ್ಡ ಏರಬೇಕು. ಇದು ಬಿಜೆಪಿಯ ಸಾಧನೆ ಎಂದರು.

ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಸ್ವಯಂ ಉದ್ಯೋಗ ಸೃಷ್ಟಿಗೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿ ಆಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತದಾರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ. ಅದೇ ರೀತಿ, ನಾನೂ ಕೂಡ ಜಿಲ್ಲೆಯ ಎಲ್ಲಾ ವರ್ಗದವರ ಪರವಾಗಿ ಧ್ವನಿಯಾಗಿ ನಿಲ್ಲುತ್ತೇನೆ. ಆದ್ದರಿಂದ ಚುನಾವಣೆಯಲ್ಲಿ ಮತ ನೀಡಿ ಹರಸಿ ಎಂದು ಕೋರಿದರು.

ನಟ ಶಿವಕುಮಾರ್ ಮಾತನಾಡಿ, ಹಳ್ಳಿಗಳಲ್ಲಿ ಬಾಂಧವ್ಯ ಹೆಚ್ಚು. ಗೀತಾ ಅವರು ಶಿವಮೊಗ್ಗದ ಮಗಳು. ಆದ್ದರಿಂದ ಜಿಲ್ಲೆಯ ಋಣ ತೀರಿಸಲು ಒಂದು ಅವಕಾಶ ಮಾಡಿಕೊಡಿ, ಗೀತಾ ಅವರಿಂದ ಕೆಲಸ ಮಾಡಿಸುವುದು ನನ್ನ ಜವಬ್ದಾರಿ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಬಡತನ ಮತ್ತು ಭಾವನೆಗಳ ಮಧ್ಯ ನಡೆಯುತ್ತಿರುವ ಚುನಾವಣೆ ಇದು. ಬಿಜೆಪಿ ಬಡವರ ಬದುಕಿನ ಬಗ್ಗೆ ಮಾತನಾಡುತ್ತಿಲ್ಲ. ಕೇವಲ ರಾಮ ಮಂದಿರ ಬಗ್ಗೆ ಹೆಚ್ಚು ಚರ್ಚಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ಉಚಿತವಾಗಿ ನೀಡಿದರೆ, ಸರ್ಕಾರದ ಖಜಾನೆ ಖಾಲಿ ಆಗಲಿದೆ ಎಂದು ಬಿಜೆಪಿಗರು ಟೀಕಿಸುತ್ತಿದ್ದಾರೆ. ಆದರೆ, ಬಿಜೆಪಿ ಆಡಲಿತದಲ್ಲಿ ಶೇ.40 ಕಮಿಷನ್ ಲೂಟಿ ಹೊಡೆದಾಗ ಸರ್ಕಾರದ ಖಜಾನೆ ಕಾಲಿ ಆಗಿಲ್ಲವ ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ನೂರಾರು ದೇವಾಲಯಗಳನ್ನು ನಿರ್ಮಿಸಿದ್ದಾರೆ. ಆದರೆ, ಎಲ್ಲಿಯೂ ಪ್ರಚಾರ ಪಡೆಯಲಿಲ್ಲ. ಬಿಜೆಪಿಯವರು ಪ್ರಚಾರಕ್ಕಾಗಿಯೇ, ದೇವರ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಆದ್ದರಿಂದ, ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕು ಎಂದರು.

ತಾಲೂಕಿನ ಹಾರೋಹಿತ್ಲು, ಕೆಂಚನಾಳ, ಅರಸಾಳು, ಕೋಡೂರು, ಮಾರುತಿಪುರ, ಬಾಳೂರು, ಮುಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಶ್ವೇತ ಬಂಡಿ, ಅನಿತಾ ಕುಮಾರಿ, ಬಂಡಿ ರಾಮಚಂದ್ರಪ್ಪ, ಬಿ.ಪಿ. ರಾಮಚಂದ್ರಪ್ಪ, ಸಾಕಮ್ಮ, ಧನಲಕ್ಷ್ಮೀ, ವೈ.ಎಚ್. ನಾಗರಾಜ, ಸುಮಾ ಸುಬ್ರಹ್ಮಣ್ಯ, ಪ್ರವೀಣ್ ಲಕ್ಷ್ಮೀಕಾಂತ್,  ಮಹೇಂದ್ರ ಬುಕ್ಕೆಹೊರೆ, ಸೂಡೂರು ಶಿವಣ್ಣ, ಇದ್ದರು‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...