ಶಿವಮೊಗ್ಗ | ಬಾಬು ಲೇಔಟ್‌ನಲ್ಲಿ ಮೂಲ ಸೌಕರ್ಯ ಕೊರತೆ; ನಿವಾಸಿಗಳ ಪರದಾಟ

Date:

ಶಿವಮೊಗ್ಗ ನಗರದ ಬಸ್‌ಸ್ಟಾಂಡ್‌ನಿಂದ 5 ಕಿ ಮೀ ವ್ಯಾಪ್ತಿಯ ಗೋಪಾಲಗೌಡ ಬಡಾವಣೆ ಮತ್ತು ಅನುಪಿನಕಟ್ಟೆಯ ನಂತರ ಇರುವ ಗೋವಿಂದಾಪುರದ ಬಾಬು ಲೇಔಟ್‌ನ ನಿವಾಸಿಗಳು ಮೂಲಸೌಕರ್ಯವಿಲ್ಲದೆ ನರಳುತ್ತಿದ್ದಾರೆ.

ಬಹುತೇಕರು ಬಡವರಿದ್ದು, ಮೂಲಸೌಕರ್ಯಗಳ ಕೊರತೆ ಹಾಗೂ ಸರ್ಕಾರದ ಸೌಲಭ್ಯದಿಂದ ವಂಚಿತರಗಿದ್ದಾರೆ. ಕಾರಣ ಇವರು ಹೊಂದಿರುವ ನಿವೇಶನಗಳು ಕಂದಾಯ ನಿವೇಶನ ಆಗಿರುವುದರಿಂದ ಸರ್ಕಾರದಿಂದ ಯಾವುದೇ ಮೂಲ ಸೌಕರ್ಯಗಳು ದೊರೆಯುತ್ತಿಲ್ಲ.

ಸ್ಥಳೀಯ ನಿವಾಸಿಯೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಳೆಗಾಲದಲ್ಲಿ ಸುತ್ತಮುತ್ತಲಿನ ಕೆರೆಗಳಿಂದ ರಸ್ತೆಗಳ ಮೇಲೆ ನೀರು ತುಂಬಿ ರಸ್ತೆಗಳು ಜಲಾವೃತವಾಗುತ್ತಿದ್ದು, ಅಲ್ಲಿಯ ಮನೆಗಳಿಗೆ ಹೋಗುವವರು ಬರುವವರಿಗೆ ರಸ್ತೆ ವ್ಯವಸ್ಥೆ ಇಲ್ಲ. ಚರಂಡಿ ವ್ಯವಸ್ಥೆ ಇಲ್ಲ, ಕುಡಿಯೋ ನೀರಿನ ವ್ಯವಸ್ಥೆಯೂ ಇಲ್ಲ. ಮಕ್ಕಳು ಶಾಲೆಗಳಿಗೆ ಹೋಗಿ ಬರಲು ತೊಂದರೆಯಾಗುತ್ತಿದೆ. ಮಳೆಗಾಲದಲ್ಲಂತೂ ಜನರ ಜೀವನ ಅಯೋಮಯವಾಗುತ್ತದೆ. ಜತೆಗೆ ಇಲ್ಲಿ ಜೀವನೋಪಾಯ ಅವ್ಯವಸ್ಥೆಯ ಆಗರವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ 3

ಗೋವಿಂದಪುರ ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸದರಿ ಸ್ಥಳ ಮೂಲತಃ ಕೃಷಿ ಖುಷ್ಕಿ ಜಮೀನಾಗಿತ್ತು. ಈ ಜಮೀನು ನೀಲಪ್ಪ ಎಂಬುವವರ ಮಗ ಮಾಲತೇಶ್ ಅವರದ್ದು, ನಂತರ ಅವರಿಂದ ಮೆಹಬೂಬ್ ಅಲಿ ಎಂಬುವವರು ಕೊಂಡುಕೊಂಡರು. ಬಳಿಕ ಖುಷ್ಕಿ ಜಮೀನನ್ನು ನಿವೇಶನಗಳ ರೂಪದಲ್ಲಿ ಸ್ಥಳೀಯ ನಿವೇಶನ ಆಕಾಂಕ್ಷಿಗಳಿಗೆ ಮಾರಾಟ ಮಾಡಿದರು” ಎಂದು ತಿಳಿಸಿದರು.

ಅವ್ಯವಸ್ಥೆ

“ಈ ನಿವೇಶನದಲ್ಲಿ ಕಟ್ಟಿರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಟ್ಟು ಪ್ರತಿ ತಿಂಗಳು ವಿದ್ಯುತ್ ಬಿಲ್ ಪಡೆಯುತ್ತಿದ್ದಾರೆ. ಮತ್ತೆ ಯಾವುದೇ ಮೂಲ ಸೌಕರ್ಯಗಳು ಸರ್ಕಾರದಿಂದ ದೊರೆಯುತ್ತಿಲ್ಲ. ಸ್ಥಳೀಯ ರಾಜಕೀಯ ನೇತಾರರು ಮತ್ತು ಸರ್ಕಾರಿ ಅಧಿಕಾರಿಗಳು ಇವರ ಕೂಗನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕರ್ನಾಟಕ ಹಲವು ವೈಶಿಷ್ಟ್ಯಗಳ ಸಾಂಸ್ಕೃತಿಕ ಬೀಡಾಗಿದೆ: ಶಾಸಕ ಗಣೇಶ್ ಪ್ರಸಾದ್

“ಜನಪ್ರತಿನಿಧಿಗಳು ಮತ್ತು ಸರ್ಕಾರ ಈಗಲಾದರೂ ಇಲ್ಲಿಯ ನಿವಾಸಿಗಳ ಕಡೆ ಗಮನ ಹರಿಸಿ ನಮ್ಮ ಅಸಹಾಯಕ ಸ್ಥಿತಿಯನ್ನು ನಿವಾರಿಸಿ, ನಮಗೆ ಮೂಲ ಸೌಕರ್ಯ ದೊರಕಿಸಬೇಕು” ಎಂದು ಮನವಿ ಮಾಡಿದರು.

ಈ ಕುರಿತು ಈ ದಿನ.ಕಾಮ್‌ ಶಿವಮೊಗ್ಗ ತಹಶೀಲ್ದಾರರಿಗೆ ಸಂಪರ್ಕಿಸಿದೆಯಾದರೂ ಲಭ್ಯವಾಗಿಲ್ಲ.

ಭಾರಧ್ವಾಜ್ ಶಿವಮೊಗ್ಗ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...